ನಮ್ಮ ಸರ್ಕಾರ (ಕಾಂಗ್ರೆಸ್) ದೇವಾಲಯಗಳ ಅರ್ಚಕರ ತಸ್ತಿಕ್ ಹಣವನ್ನು ಏರಿಸಿದೆ. ಇದಕ್ಕೂ ನಿಮ್ಮ ಆಕ್ಷೇಪ ಇದೆಯೇ ಎಂದು ಕೇಳಿರುವ ಕಾಂಗ್ರೆಸ್, ವಿದ್ಯುತ್ ದರ ಏರಿಸಿದ್ದು ಹಿಂದಿನ ಬಿಜೆಪಿ ಸರ್ಕಾರ ಎನ್ನುವುದು ನಿಮಗೆ ತಿಳಿದಿಲ್ಲವೇ, ಗ್ಯಾಸ್ ಬೆಲೆ, ಪೆಟ್ರೋಲ್, ಡೀಸೇಲ್ ಬೆಲೆ ಏರಿಕೆಯ ಬಗ್ಗೆ ಮಾತಾಡುವುದಿಲ್ಲವೇಕೆ, ದುಬಾರಿ ಜಿಎಸ್‌ಟಿ ಬಗ್ಗೆ ತುಟಿ ಬಿಚ್ಚುವುದಿಲ್ಲವೇಕೆ ಎಂದು ವಾಗ್ದಾಳಿ ನಡೆಸಿದೆ.
ಜನರ ಹಣವನ್ನು ಜನರಿಗೆ ಕೊಡುವ ಬಗ್ಗೆ ಇಷ್ಟೊಂದು ಅಸಹನೆ ತೋರುವ ನಿಮ್ಮ (ಬಿಜೆಪಿಗರು) ಪ್ರಕಾರ, ಜನರ ಹಣವನ್ನು ಉದ್ಯಮಿಗಳ ಸಾಲ ಮನ್ನಾ ಮಾಡಲು ಬಳಸುವುದು ಅಭಿವೃದ್ಧಿಯೇ ಎಂದು ಕಾಂಗ್ರೆಸ್ ಟೀಕಿಸಿದೆ.