ಬೆಂಗಳೂರು: ಅವಸಾನದ ಅಂಚಿನಲ್ಲಿ ಕಾಂಗ್ರೆಸ್ ಪಕ್ಷವು ರಾಮನಾಮ ಜಪಿಸುತ್ತಿದೆ ಎಂದು ಬಿಜೆಪಿ ಮಂಗಳವಾರ ತಿರುಗೇಟು ನೀಡಿದೆ.

ಬಿಜೆಪಿಯವರು ‘ಜೈ ಶ್ರೀರಾಮ್’ ಎಂದರೆ ಸ್ವತಃ ರಾಮನೇ ಅಸಹ್ಯಪಟ್ಟುಕೊಳ್ಳುತ್ತಾನೆ ಎಂಬ ಕಾಂಗ್ರೆಸ್ ಟೀಕೆಗೆ ತಿರುಗೇಟು ನೀಡಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್‌ಗೆ ಇದ್ದಕ್ಕಿದ್ದಂತೆಯೇ ರಾಮಭಕ್ತಿ ಬರಲು ಕಾರಣವೇನು ಎಂದು ಪ್ರಶ್ನಿಸಿದೆ.

ಇದನ್ನೂ ಓದಿ:ಬಿಜೆಪಿಯವರು ‘ಜೈ ಶ್ರೀರಾಮ್’ ಎಂದರೆ ಸ್ವತಃ ರಾಮನೇ ಅಸಹ್ಯಪಡುತ್ತಾನೆ: ಕಾಂಗ್ರೆಸ್

‘ಕಾಂಗ್ರೆಸ್ ಅವಸಾನದ ಅಂಚಿನಲ್ಲಿ ರಾಮನಾಮ ಜಪಿಸುತ್ತಿದೆ.ರಾಮಸೇತು ಒಡೆಯಲು ಯತ್ನಿಸಿದರು, ರಾಮಮಂದಿರ ನಿರ್ಮಾಣಕ್ಕೆ ವಿರೋಧಿಸಿದರು, ಜೈ ಶ್ರೀರಾಮ್ ಘೋಷಣೆ ಕೂಗಿದವರ ಮೇಲೆ ಹಲ್ಲೆ ಮಾಡಿದರು, ಇಷ್ಟೆಲ್ಲಾ ಮಾಡಿರುವ ಕಾಂಗ್ರೆಸ್ ಪಕ್ಷಕ್ಕೆ ಇದ್ದಕ್ಕಿದ್ದಂತೆಯೇ ರಾಮಭಕ್ತಿ ಬರಲು ಕಾರಣವೇನು?’ ಎಂದು ಕರ್ನಾಟಕ ಬಿಜೆಪಿಯ ಅಧಿಕೃತ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಲಾಗಿದೆ.

ಸರಣಿ ಟ್ವೀಟ್ ಮಾಡಿದ್ದ ಕಾಂಗ್ರೆಸ್, ‘ಬಿಜೆಪಿಗರು ‘ಜೈ ಶ್ರೀರಾಮ್’ ಎಂದರೆ ಸ್ವತಃ ರಾಮನೇ ಅಸಹ್ಯಪಟ್ಟುಕೊಳ್ಳುತ್ತಾನೆ. ರಾಮನ ಹೆಸರಲ್ಲಿ ಬಿಜೆಪಿ ಸರ್ಕಾರ ಮಾಡಬಾರದ್ದೆಲ್ಲವನ್ನೂ ಮಾಡುತ್ತಿದೆ’ ಎಂದು ಟೀಕಿಸಿತ್ತು.

ಇದನ್ನೂ ಓದಿ:ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಸಿಡಿ ಪ್ರಕರಣಗಳು ಯಾವ ರೀತಿ ತನಿಖೆಯಾಗಿವೆ?: ಬಿಜೆಪಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.