ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಡಿಸಿಎಂ ಕೇಳುವವರು ಉಪ ಚುನಾವಣೆ ಗೆಲ್ಲಿಸಿಕೊಂಡು ಬರಲಿ: ಶಾಸಕ ಎಚ್‌.ಸಿ. ಬಾಲಕೃಷ್ಣ

Published 25 ಜೂನ್ 2024, 16:38 IST
Last Updated 25 ಜೂನ್ 2024, 16:38 IST
ಅಕ್ಷರ ಗಾತ್ರ

ಬೆಂಗಳೂರು: ‘ಉಪಮುಖ್ಯಮಂತ್ರಿ (ಡಿಸಿಎಂ) ಹುದ್ದೆ ಕೇಳುವವರು ಉಪ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಿಕೊಂಡು ಬರಲಿ’ ಎಂದು ಮಾಗಡಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಎಚ್‌.ಸಿ. ಬಾಲಕೃಷ್ಣ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮೂರು ಉಪಚುನಾವಣೆಗಳಲ್ಲಿ ಗೆಲ್ಲಬೇಕು. ಹೀಗಾಗಿ ತಯಾರಿ ನಡೆಯುತ್ತಿದೆ. ಅದಕ್ಕಾಗಿ ಸಮಿತಿಗಳನ್ನು ರಚಿಸಲಾಗಿದೆ. ಸಚಿವರಿಗೆ ಜವಾಬ್ದಾರಿಯನ್ನು ನೀಡಲಾಗಿದೆ. ಈಗ ಉಪಮುಖ್ಯಮಂತ್ರಿ ಹುದ್ದೆ ಕೇಳುತ್ತಿರುವವರಿಗೆ ಜವಾಬ್ದಾರಿ ಕೊಟ್ಟು ಏನಾಗುತ್ತದೆಂದು ನೋಡಬೇಕು’ ಎಂದರು.

ಹೆಚ್ಚುವರಿ ಉಪ ಮುಖ್ಯಮಂತ್ರಿ ಹುದ್ದೆ ಬೇಡಿಕೆ ವಿಚಾರವಾಗಿ ಸಚಿವರು ನೀಡಿದ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು, ‘ಹೆಚ್ಚುವರಿ ಉಪ ಮುಖ್ಯಮಂತ್ರಿ ಮಾಡಲಿ. ಬೇಡ ಅಂದವರು ಯಾರು? ನಮಗೆ ಲೋಕಸಭೆ ಚುನಾವಣೆಯಲ್ಲಿ ಹಿನ್ನಡೆ ಆಗಿದೆ. ಹೀಗಾಗಿ ಸಮುದಾಯವಾರು ಉಪ ಮುಖ್ಯಮಂತ್ರಿ ಮಾಡಲಿ. ಅಹಿಂದ ವರ್ಗದವರಿಗೂ ಉಪ ಮುಖ್ಯಮಂತ್ರಿ ಹುದ್ದೆ ಕೊಡಲಿ. ಯಾರಿಗೆ ಶಕ್ತಿ ಇದೆಯೋ ಅವರು ಬದುಕುತ್ತಾರೆ. ಶಕ್ತಿ ಇಲ್ಲದವರು ಬದುಕುವುದಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT