ಪಂಚರಾಜ್ಯಗಳಲ್ಲಿನ ಚುನಾವಣೆ ಸೋಲಿನ ಭಯ ಮತ್ತು ಶ್ರೀಮಂತ ಉದ್ಯಮಿ - ಗುತ್ತಿಗೆದಾರರನ್ನು ಬ್ಲಾಕ್ ಮೇಲ್ ಮಾಡುವ ದುರುದ್ದೇಶದ ಕಾರಣಕ್ಕಾಗಿಯೇ ಕೇಂದ್ರದ @narendramodi ನೇತೃತ್ವದ @BJP4India ಸರ್ಕಾರ ಕರ್ನಾಟಕವೂ ಸೇರಿದಂತೆ ದೇಶದಾದ್ಯಂತ ಐಟಿ- ಇಡಿ ದಾಳಿಗಳನ್ನು ನಡೆಸುತ್ತಿದೆ. 1/11#ModiRidesIT pic.twitter.com/0QgW3xVXEX
— Siddaramaiah (@siddaramaiah) October 17, 2023
ಕಾರ್ಪೊರೆಟ್ ಭ್ರಷ್ಟಾಚಾರದ ಮೂಲಕ ಲಕ್ಷಾಂತರ ಕೋಟಿ ರೂಪಾಯಿ ಲೂಟಿ ಹೊಡೆದು ದೇಶವನ್ನೇ ಅದಾನಿ ಕೈಗೆ ಒತ್ತೆಯಿಟ್ಟಿರುವ ಈ ಬಿಜೆಪಿಗರು ಇಂದು ಭ್ರಷ್ಟಾಚಾರದ ಬಗ್ಗೆ ಮಾತನಾಡುವುದೇ ದೊಡ್ಡ ಕುಚೋದ್ಯ! ಅದಾನಿ ಎನ್ನುವ ಉದ್ಯಮಿಯ ಒಂದೊಂದು ಹಗರಣಗಳು ಲಕ್ಷ ಕೋಟಿಗಳನ್ನು ದಾಟುತ್ತಿವೆ! ಸಾವಿರ ಕೋಟಿಗಳ ಅವ್ಯವಹಾರಕ್ಕೆ ಲೆಕ್ಕವೇ ಇಲ್ಲವಾಗಿದೆ. ಈ ಬಗ್ಗೆ… pic.twitter.com/74LN9G4Ow7
— Siddaramaiah (@siddaramaiah) October 17, 2023
ಗುತ್ತಿಗೆದಾರರೊಬ್ಬರನ್ನು ಹಣಕ್ಕಾಗಿ ಪೀಡಿಸಿ ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡಿದ್ದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರು ಮತ್ತು ಭ್ರಷ್ಟಾಚಾರದ ಆರೋಪದ ಮೇಲೆಯೇ ಜೈಲಿಗೆ ಹೋಗಿ ಬಂದಿರುವ ಬಿ.ಎಸ್.ಯಡಿಯೂರಪ್ಪನವರು ಮತ್ತು ಅವರ ಮಗ ಕೂಡಾ ಸತ್ಯಹರಿಶ್ಚಂದ್ರನಂತೆ ಮಾತನಾಡುತ್ತಿರುವುದು ತಮಾಷೆಯಾಗಿ ಕಾಣುತ್ತಿದೆ. 10/11#ModiRidesIT
— Siddaramaiah (@siddaramaiah) October 17, 2023
ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಮುನಿರತ್ನ, ಡಾ.ಸುಧಾಕರ್ ಮತ್ತು ಬಿ.ಸಿ.ಪಾಟೀಲ್ ಮೇಲೆ 40% ಕಮಿಷನ್ ಆರೋಪ ಇದೆ. ಬಿಟ್ ಕಾಯಿನ್ ಹಗರಣದದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೆಸರು ಕೇಳಿಬಂದಿದೆ. ಪಿಎಸ್ ಐ ನೇಮಕಾತಿ ಹಗರಣದಲ್ಲಿ ಡಾ.ಅಶ್ವತನಾರಾಯಣ, ಬಿ.ವೈ.ವಿಜಯೇಂದ್ರ ಮತ್ತು ಆರಗ… pic.twitter.com/3lFrAGGS5p
— Siddaramaiah (@siddaramaiah) October 17, 2023
ರಾಜ್ಯದಲ್ಲಿನ ಭ್ರಷ್ಟಾಚಾರದ ಇತಿಹಾಸವನ್ನು ತಿರುವಿಹಾಕಿದರೆ ಪುಟಪುಟಗಳಲ್ಲಿಯೂ ಬಿಜೆಪಿ ನಾಯಕರ ಮುಖಾರವಿಂದಗಳನ್ನು ಕಾಣಬಹುದಾಗಿದೆ. ಮಾಜಿ ಮುಖ್ಯಮಂತ್ರಿಗಳಾಧ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವರಾದ ಜನಾರ್ದನ ರೆಡ್ಡಿ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಕೃಷ್ಣಯ್ಯ ಶೆಟ್ಟಿ, ಮಾಜಿ ಶಾಸಕ ಸಂಪಂಗಿಯಿಂದ ಹಿಡಿದು ಇತ್ತೀಚಿನ ಮಾಡಾಳು ವಿರೂಪಾಕ್ಷಪ್ಪನವರ… pic.twitter.com/6k8T06MP9O
— Siddaramaiah (@siddaramaiah) October 17, 2023
ಇತ್ತೀಚಿನ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿದರೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಶತಸಿದ್ದ. ತನ್ನ ಸೋಲಿಗೆ ಕಾರಣ ಹೇಳಲು ಬಿಜೆಪಿ ಈಗಲೇ ಕುಂಟುನೆಪಗಳನ್ನು ಹುಡುಕುತ್ತಿದೆ. ಕಾಂಗ್ರೆಸ್ ಪಕ್ಷದ ದುಡ್ಡಿನಬಲದಿಂದಾಗಿ ನಾವು ಸೋತುಹೋದೆವು ಎಂದು ಚುನಾವಣೆಯ ಮರುದಿನ ಬಿಜೆಪಿಯಿಂದ ಹೇಳಿಕೆ ಬಂದರೆ ಯಾರೂ ಆಶ್ಚರ್ಯಪಡಬೇಕಾಗಿಲ್ಲ.… pic.twitter.com/c6eKJhLZxu
— Siddaramaiah (@siddaramaiah) October 17, 2023
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.