ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಒಬ್ಬರು ಕುರ್ಚಿ ಉಳಿಸಿಕೊಳ್ಳಲು, ಇನ್ನೊಬ್ಬರು ಕುರ್ಚಿ ಕಿತ್ತುಕೊಳ್ಳಲು ತಂತ್ರ ಹೆಣೆಯುತ್ತಿದ್ದಾರೆ. ಊಟ, ರಹಸ್ಯ ಸಭೆಗಳ ಮೂಲಕ ಕಾಲಹರಣ ಮಾಡುತ್ತಾ ಜನರ ಹಿತ ಮರೆತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಟೀಕಿಸಿದ್ದಾರೆ.

ಈ ಕುರಿತು ‘ಎಕ್ಸ್’ ಮಾಡಿರುವ ಅವರು, ಇಬ್ಬರ ನಡುವೆ ಅತಂತ್ರವಾಗಿರುವ ಮಂತ್ರಿಗಳು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಕಸರತ್ತು ನಡೆಸಿದ್ದಾರೆ. ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ. ರೈತರ ಕಷ್ಟ ಕೇಳುವವರೇ ಇಲ್ಲವಾಗಿದೆ ಎಂದಿದ್ದಾರೆ.

ಮಂಡ್ಯದಲ್ಲಿ ಭತ್ತ ಖರೀದಿ ಕೇಂದ್ರಗಳು ಆರಂಭವಾಗದ ಕಾರಣ ರೈತರು ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ದಲ್ಲಾಳಿಗಳಿಗೆ ಮಾರಾಟ ಮಾಡುತ್ತಿದ್ದಾರೆ. ಕ್ವಿಂಟಲ್ ಭತ್ತಕ್ಕೆ ₹3 ಸಾವಿರ ಬೆಂಬಲ ಬೆಲೆ ನಿಗದಿಯಾಗಿದ್ದರೂ, ಖರೀದಿ ಕೇಂದ್ರಗಳನ್ನು ತೆರೆದಿಲ್ಲ. ಹಾಗಾಗಿ, ನಷ್ಟ ಅನುಭವಿಸುತ್ತಿದ್ದಾರೆ. ಕೃಷಿ ಸಚಿವರ ತವರಿನಲ್ಲೇ ಈ ಸ್ಥಿತಿ ಎದುರಾಗಿದೆ ಎಂದು ದೂರಿದ್ದಾರೆ.

ಕಲ್ಯಾಣ ಕರ್ನಾಟಕದ ಪ್ರಮುಖ ವಾಣಿಜ್ಯ ಬೆಳೆಯಾದ ತೊಗರಿ ಬೆಲೆಯೂ ಇಳಿಯುತ್ತಿದೆ. ತೊಗರಿ ಖರೀದಿ ಕೇಂದ್ರಕ್ಕಾಗಿ ರೈತರು ಎದುರು ನೋಡುತ್ತಿದ್ದಾರೆ. 1.82 ಲಕ್ಷ ಹೆಕ್ಟೇರ್ನಲ್ಲಿ ಬೆಳೆದ ತೊಗರಿ ಬೆಳೆ ನಾಶವಾಗಿದ್ದರೂ, ರಾಜ್ಯ ಸರ್ಕಾರ ಪರಿಹಾರದ ಭರವಸೆ ನೀಡುತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಚಕಾರ ಎತ್ತುತ್ತಿಲ್ಲ. ಈ ಸರ್ಕಾರ ಬದಲಾಗುವವರೆಗೂ ಜನರಿಗೆ ನೆಮ್ಮದಿ ಇಲ್ಲ ಎಂದು ಟೀಕಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.