ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅವಿಶ್ವಾಸ ನಿರ್ಣಯ ಮಂಡಿಸಿದರೆ ಸಭಾಪತಿ ಸ್ಥಾನದಲ್ಲಿ ಒಂದು ಕ್ಷಣವೂ ಕೂರುವುದಿಲ್ಲ:ಹೊರಟ್ಟಿ

Published 6 ಜೂನ್ 2023, 7:40 IST
Last Updated 6 ಜೂನ್ 2023, 7:40 IST
ಅಕ್ಷರ ಗಾತ್ರ

ಬೆಂಗಳೂರು: ನನ್ನ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದರೆ ಸಭಾಪತಿ ಸ್ಥಾನದಲ್ಲಿ ಒಂದು ಕ್ಷಣವೂ ಕೂರುವುದಿಲ್ಲ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪರಿಷತ್‌ನಲ್ಲಿ ಕಾಂಗ್ರೆಸ್‌ಗೆ ಬಹುಮತ ಇಲ್ಲ. 2024ರ ಜೂನ್ ವರೆಗೂ ಸಭಾಪತಿ ಸ್ಥಾನಕ್ಕೆ ಯಾವುದೇ ಸಮಸ್ಯೆ ಇಲ್ಲ. ಮುಂದಿನ ವರ್ಷ ಕೆಲವೊಂದು ಸ್ಥಾನಗಳು ತೆರವಾಗಲಿವೆ. ಆಗ ಬಿಜೆಪಿಗೆ ಬಹುಮತ ಇಲ್ಲದಂತಾಗಬಹುದು. ಆದರೆ ಈಗ ಆ ರೀತಿಯ ಪರಿಸ್ಥಿತಿ ಇಲ್ಲ ಎಂದು ತಿಳಿಸಿದ್ದಾರೆ.

ಇಂದು ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದೆ. ಅವರ ಹಾಗೂ ನನ್ನ ಗೆಳೆತನ ಮೊದಲಿನಿಂದಲೂ ಗಟ್ಟಿಯಾಗಿದೆ.‌ ಹಾಗಾಗಿ ಭೇಟಿ ಮಾಡಿದ್ದೆ ಹೊರತು ಯಾವುದೇ ರಾಜಕೀಯ ಕಾರಣಗಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT