ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಜೆಪಿ ಜತೆ ಕೈಜೋಡಿಸದ ಒಂದು ಪಕ್ಷ ತೋರಿಸಿ: ಎಚ್.ಡಿ. ದೇವೇಗೌಡ

Published : 6 ಜೂನ್ 2023, 7:17 IST
Last Updated : 6 ಜೂನ್ 2023, 7:17 IST
ಫಾಲೋ ಮಾಡಿ
Comments

ಬೆಂಗಳೂರು: 'ದೇಶದಲ್ಲಿ ಬಿಜೆಪಿ ಜತೆ ಕೈಜೋಡಿಸದೇ ಇರುವ ಯಾವುದಾದರೂ ಒಂದು ಪಕ್ಷವನ್ನು ತೋರಿಸಿ. ಆ ನಂತರ ವಿಪಕ್ಷಗಳ ಒಗ್ಗಟ್ಟಿನ ಬಗ್ಗೆ ಮಾತನಾಡುವೆ' ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.‌ದೇವೇಗೌಡ ಹೇಳಿದರು.

ಪಕ್ಷದ ಪ್ರಧಾನ ಕಚೇರಿ ಜೆ.ಪಿ. ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ 'ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನಡೆಸುತ್ತಿರುವ ಪ್ರಯತ್ನದಲ್ಲಿ ಜೆಡಿಎಸ್ ಕೈ ಜೋಡಿಸಲಿದೆಯೆ?' ಎಂಬ ಪ್ರಶ್ನೆಗೆ ಅವರು ಈ ರೀತಿ ಮರು ಸವಾಲು ಹಾಕಿದರು.

'ಎಲ್ಲ ಪಕ್ಷಗಳೂ ಬಿಜೆಪಿ ಜತೆ ನೇರವಾಗಿ ಅಥವ ಪರೋಕ್ಷವಾಗಿ ಕೈಜೋಡಿಸಿವೆ. ಕಾಂಗ್ರೆಸ್ ಪಕ್ಷದ‌ ಕೆಲವು ನಾಯಕರೂ ಅವರಲ್ಲಿ ಸೇರಿದ್ದಾರೆ' ಎಂದರು.

ಜೆಡಿಎಸ್ ಈಗ ಲೋಕಸಭಾ ಚುನಾವಣೆ ಬಗ್ಗೆ ಚಿಂತಿಸುವುದಿಲ್ಲ. ಈಗ ಪಕ್ಷದ ಮುಂದೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ಬಿಬಿಎಂಪಿ ಚುನಾವಣೆಗಳಿವೆ. ಈ ಚುನಾವಣೆಗಳಲ್ಲಿ ಪಕ್ಷ ಪಡೆಯುವ ಜನಬೆಂಬಲ ಆಧರಿಸಿ ಲೋಕಸಭಾ ಚುನಾವಣೆಯಲ್ಲಿ ಎಷ್ಟು ಕ್ಷೇತ್ರಗಳಲ್ಲಿ? ಯಾವ ಕ್ಷೇತ್ರಗಳಲ್ಲಿ? ಸ್ಪರ್ಧಿಸಬೇಕು ಎಂಬುದನ್ನು ನಿರ್ಧರಿಸಲಾಗುವುದು ಎಂದರು‌.

'ನನಗೆ ಈಗ 91 ವರ್ಷ ವಯಸ್ಸು. ಈಗ‌ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಪ್ರಶ್ನೆ ಉದ್ಭವಿಸುವುದಿಲ್ಲ. ಯಾರು ಅಭ್ಯರ್ಥಿ ಆಗಬೇಕು ಎಂಬುದನ್ನು ಪಕ್ಷ ನಿರ್ಧಾರ ಮಾಡುತ್ತದೆ' ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ವಿಧಾನಸಭಾ ಚುನಾವಣೆಯ ಸೋಲಿನಿಂದ ಕಾರ್ಯಕರ್ತರು ಹತಾಶರಾಗಬೇಕಿಲ್ಲ. ಎಲ್ಲ ಹಂತಗಳಲ್ಲಿ ಪಕ್ಷದ ಸಂಘಟನೆಯಲ್ಲಿ ಬದಲಾವಣೆಗಳನ್ನು ಮಾಡಲಾಗುವುದು. ಪಕ್ಷವನ್ನು ಮತ್ತೆ ಬಲವಾಗಿ ಕಟ್ಟುವುದು ತಮ್ಮ ಮುಂದಿನ ಗುರಿ ಎಂದರು.

ಓದಿ... ಲೋಕಸಭೆ ಚುನಾವಣೆ: ಬಿಜೆಪಿ– ಜೆಡಿಎಸ್‌ ಮೈತ್ರಿ?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT