ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೇಣುಕಾಚಾರ್ಯ ಭೇಟಿಯಲ್ಲಿ ತಪ್ಪೇನಿದೆ: ಡಿ.ಕೆ. ಶಿವಕುಮಾರ್‌ ಪ್ರಶ್ನೆ

Published 26 ಆಗಸ್ಟ್ 2023, 9:31 IST
Last Updated 26 ಆಗಸ್ಟ್ 2023, 9:31 IST
ಅಕ್ಷರ ಗಾತ್ರ

ಬೆಂಗಳೂರು: ಹೊನ್ನಾಳಿ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ಮುಖಂಡ ಎಂ.ಪಿ. ರೇಣುಕಾಚಾರ್ಯ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ.

ರೇಣುಕಾಚಾರ್ಯ ಭೇಟಿ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅವರದೇ ಆದ ವಿಚಾರ, ಜನ ಹಾಗೂ ಕ್ಷೇತ್ರದ ಸಮಸ್ಯೆ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಮಾತಮಾಡಲು ಬರುತ್ತಾರೆ. ಅಧಿಕಾರದಲ್ಲಿ ಇದ್ದಾಗ ಅವರು ಬಂದು ನಮ್ಮನ್ನು ಭೇಟಿ ಮಾಡಿ ಕೆಲಸ ಮಾಡಿಸಿಕೊಳ್ಳುತ್ತಾರೆ. ಅದರಲ್ಲಿ ತಪ್ಪೇನಿದೆ? ಸೋಮಶೇಖರ್ ಅವರ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಿದೆ. ಅದಕ್ಕಾಗಿ ಅಲ್ಲಿಗೆ ಹೋಗುತ್ತಿದ್ದೇನೆ. ಜನಪ್ರತಿನಿಧಿಗಳಿಗೆ ನಾವು ಗೌರವ ಸಲ್ಲಿಸುತ್ತೇವೆ. ಹಾಲಿ ಶಾಸಕರಲ್ಲದಿದ್ದರೂ ಅವರ ಸಮಸ್ಯೆಗಳಿರುತ್ತವೆ. ಅವುಗಳನ್ನು ನಾನು ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ. ನಮಗೆ ಆಪರೇಷನ್ ಹಸ್ತ ಮಾಡುವ ಅಗತ್ಯವಿಲ್ಲ. ರಾಜಕೀಯವಾಗಿ ಅನೇಕ ಆಸೆ ಆಕಾಂಕ್ಷೆಗಳಿರುತ್ತವೆ. ಅವರು ಎಷ್ಟು ದಿನ ಎಂದು ಕಾಯುತ್ತಾರೆ. ನಾವು ನಮ್ಮ ಕಾರ್ಯಕರ್ತರು ಹಾಗೂ ಮುಖಂಡರಿಗೆ ಸ್ಥಳೀಯ ಮಟ್ಟದಲ್ಲಿ ಬೇರೆ ಪಕ್ಷದವರನ್ನು ಸೇರಿಸಿಕೊಳ್ಳಲು ಸೂಚಿಸಿದ್ದೇವೆ ಅಷ್ಟೆ’ ಎಂದು ಹೇಳಿದ್ದಾರೆ.

‘ನಮ್ಮ ಗ್ಯಾರಂಟಿ ಯೋಜನೆಗಳು ಕೇವಲ ಕಾಂಗ್ರೆಸ್ ಕಾರ್ಯಕರ್ತರಿಗಲ್ಲ. ಎಲ್ಲಾ ಪಕ್ಷದವರಿಗೂ ಸಲ್ಲುತ್ತದೆ. ಉಡುಪಿಯಲ್ಲಿ ನಮ್ಮ ಯಾವುದೇ ಶಾಸಕರು ಇಲ್ಲ. ಆದರೂ ಶೇ 80ರಷ್ಟು ಜನ ನೋಂದಣಿ ಮಾಡಿಸಿಕೊಂಡಿದ್ದಾರೆ. ನಮ್ಮ ಯೋಜನೆ ಪಕ್ಷಾತೀತವಾಗಿ ಸಿಗಲಿದೆ. ಹೀಗಾಗಿ ಬೇರೆ ಪಕ್ಷದ ಶಾಸಕರು ನಮ್ಮ ಸರ್ಕಾರ ಈ ಕೆಲಸ ಮಾಡಲಿಲ್ಲ. ನಿಮ್ಮ ಸರ್ಕಾರ ಮಾಡಿದೆ ಎಂದು ಶುಭ ಹಾರೈಸುತ್ತಿದ್ದಾರೆ. ಅದರಲ್ಲಿ ತಪ್ಪೇನಿದೆ’ ಎಂದು ತಿಳಿಸಿದ್ದಾರೆ.

ಕೆಪಿಸಿಸಿ ಪುನಾರಚನೆ ಶೀಘ್ರ: ಕೆಪಿಸಿಸಿಗೆ ನೂತನ ಕಾರ್ಯಾಧ್ಯಕ್ಷರ ನೇಮಕ ವಿಚಾರವಾಗಿ ಕೇಳಿದಾಗ, 'ಕೇವಲ ಕಾರ್ಯಾಧ್ಯಕ್ಷರು ಮಾತ್ರವಲ್ಲ, ಇಡೀ ತಂಡವನ್ನೆ ಬದಲಿಸಬೇಕಿದೆ. ನಮ್ಮಲ್ಲಿ ಅನೇಕರು ಸಚಿವರಾಗಿದ್ದು, ಅವರನ್ನು ಪಕ್ಷದ ಜವಾಬ್ದಾರಿಯಿಂದ ಮುಕ್ತಗೊಳಿಸಬೇಕಿದೆ. ಹೊಸಬರಿಗೆ ಅವಕಾಶ ಮಾಡಿಕೊಡಬೇಕಿದೆ' ಎಂದು ತಿಳಿಸಿದರು.

ಇವನ್ನೂ ಓದಿ...

ಸಿಎಂ, ಡಿಸಿಎಂ ಭೇಟಿಯಾದ ಬಿಜೆಪಿ ಮುಖಂಡ ರೇಣುಕಾಚಾರ್ಯ: ರಾಜಕೀಯ ವಲಯದಲ್ಲಿ ಚರ್ಚೆ

ಕಾವೇರಿ ಜಲ ವಿವಾದ | ವಾಸ್ತವಾಂಶ ನ್ಯಾಯಾಲಯದ ಮುಂದಿಟ್ಟಿದ್ದೇವೆ: ಡಿ.ಕೆ.ಶಿವಕುಮಾರ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT