ಬೆಂಗಳೂರು: ‘ಮುಡಾ’ ಕುರಿತು ಜಾರಿ ನಿರ್ದೇಶನಾಲಯದ (ಇ.ಡಿ) ನೀಡಿದ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಡಾ ಹಗರಣದ ಬಗ್ಗೆ ಹೊರಡಿಸಿದ ಪತ್ರಿಕಾ ಪ್ರಕಟಣೆಗೂ ನನಗೂ ಸಂಬಂಧವಿಲ್ಲ.

ಬಿಜೆಪಿ ಈ ಪತ್ರಿಕಾ ಪ್ರಕಟಣೆಯನ್ನು ಅನಗತ್ಯವಾಗಿ ಇ.ಡಿ. ಮೂಲಕ ಬಿಡುಗಡೆ ಮಾಡಿಸಿದೆ ಎಂದರು.

ಹಣ ದುರುಪಯೋಗದ ಪ್ರಶ್ನೆ ಇಲ್ಲ: ಮುಡಾ ಮತ್ತು ವಾಲ್ಮೀಕಿ ನಿಗಮದ ಹಗರಣದ ಪ್ರತಿಪಕ್ಷಗಳ ಆರೋಪ ಹಾಗೂ ರಾಜ್ಯದ ತೆರಿಗೆ ಹಣದಲ್ಲಿ ನಾಳಿನ ಸಮಾರಂಭ ನಡೆಸುತ್ತಿರುವ ಬಗ್ಗೆ ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಣ ದುರುಪಯೋಗ ಆಗಿರುವ ಪ್ರಶ್ನೆಯೇ ಇಲ್ಲ ಎಂದರು.

ತಪ್ಪಿತಸ್ಥರ ವಿರುದ್ಧ ಕ್ರಮ: ವಿಜಯಪುರದಲ್ಲಿ ಕಾರ್ಮಿಕರ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಮೈಕ್ರೋ ಫೈನಾನ್ಸ್ ದಂಧೆ, ಕಾನೂನು ರೀತ್ಯ ಕ್ರಮ: ಮೈಸೂರು ಚಾಮರಾಜನಗರ ಜಿಲ್ಲೆಗಳ ಗ್ರಾಮೀಣ ಭಾಗದಲ್ಲಿ ಮೈಕ್ರೋ ಫೈನಾನ್ಸ್ ದಂಧೆ ಹೆಚ್ಚಿದ್ದು, ಜನರಿಗೆ ಕಿರುಕುಳ ನೀಡುತ್ತಿರುವ ಬಗ್ಗೆ, ಜನರಿಗೆ ಕಿರುಕುಳ ನೀಡುವ ಮೈಕ್ರೋ ಫೈನಾನ್ಸ್ ದಂಧೆ ನಡೆಸುತ್ತಿರುವ ಸಂಸ್ಥೆಯ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

1924ರ ಬೆಳಗಾವಿ ಕಾಂಗ್ರೆಸ್ ಸಮಾವೇಶದ ಶತಮಾನೋತ್ಸವ ಸ್ಮರಣಾರ್ಥವಾಗಿ ಮಹಾತ್ಮಾ ಗಾಂಧೀಜಿ ಪ್ರತಿಮೆ ಅನಾವರಣ ನಂತರ ಸಾರ್ವಜನಿಕ ಸಭೆ ನಡೆಸಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.