ಬಾಗಲಕೋಟೆ: 'ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರದ ಕಿತ್ತಾಟ ಜೋರಾಗಿ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನು ಕೇವಲ 15 ದಿನಗಳ ಸರದಾರ ಮಾತ್ರ’ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ದಿನವೇ ಸಿದ್ಧರಾಮಯ್ಯ ಅವರ ಕುರ್ಚಿ ಫಲಿತಾಂಶ ಪ್ರಕಟ ಆಗಲಿದೆ ಎಂದರು.

ರಾಜ್ಯ ಸರ್ಕಾರದಲ್ಲಿ ಕುರ್ಚಿ ಕಚ್ಚಾಟದಿಂದಾಗಿ ವಿಧಾನಸೌಧದಲ್ಲಿ ಆಡಳಿತವೇ ಇಲ್ಲದಂತಾಗಿದೆ. ಮೇ 4 ರಂದು ಐದು ರಾಜ್ಯಗಳ ಚುನಾವಣೆ ಫಲಿತಾಂಶ ಬರುತ್ತದೆ. ಅಂದು ದಾವಣಗೇರಿ ಮತ್ತು ಬಾಗಲಕೋಟೆ ರಿಜಲ್ಟ್ ಸಹ ಬರುತ್ತದೆ. ಅದರ ಜೊತೆಗೆ ಸಿದ್ದರಾಮಯ್ಯ ಅವರ ಕುರ್ಚಿಯ ರಿಜಲ್ಟ್ ಕೂಡ ಬರಲಿದೆ ಎಂದರು.

ಮಾಹಿತಿ ಪ್ರಕಾರ ಡಿ.ಕೆ.ಶಿವಕುಮಾರ ಸಿಎಂ ಆಗಲು ಶಾಲು ಹೊತ್ತುಕೊಂಡು ಕೂತಿದ್ದಾರೆ. ಸಿದ್ಧರಾಮಯ್ಯ ಬೆಂಬಲಿಗ 40 ಜನ ಶಾಸಕರು, ಡಿ.ಕೆ.ಶಿವಕುಮಾರ ಪರವಾಗಿ 50 ಶಾಸಕರು ಹೈಕಮಾಂಡ್ ಬಳಿ ಹೋಗಿ ಲಾಭಿ ನಡೆಸುತ್ತಿದ್ದಾರೆ ಎಂದು ಹೇಳಿದರು.

ರಾಜ್ಯದ ಅನೇಕ ಕಡೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಸಮಸ್ಯೆ ಇರುವ ಜಿಲ್ಲೆಗಳಿಗೆ ತಲಾ ₹ 50 ಕೋಟಿ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು ಎಂದು ಕಾರಜೋಳ ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.