ಬೆಂಗಳೂರು: ‘ದೇಶದ ಏಕತೆ, ಸಮಗ್ರತೆ ಯನ್ನು ಉಳಿಸಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿರುವ ಕಾಲಘಟ್ಟದಲ್ಲಿ ನಾವಿದ್ದೇವೆ. ಕಾಂಗ್ರೆಸ್ನಿಂದ ಮಾತ್ರವೇ ಇದು ಸಾಧ್ಯವಿದ್ದು, ಈ ಹೋರಾಟದಲ್ಲಿ ನಾವು ನಿಮ್ಮೊಂದಿಗೆ ಇರುತ್ತೇವೆ’ ಎಂದು ಉಸ್ತುವಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ (ಸಿಎಲ್ಪಿ) ಡಿ.ಕೆ.ಶಿವಕುಮಾರ್ ಅವರಿಗೆ ಭರವಸೆ ನೀಡಿದ್ದಾರೆ.

ಸಿಎಲ್ಪಿ ನೂತನ ನಾಯಕನಾಗಿ ಆಯ್ಕೆಯಾದ ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿ ಸಿದ್ದರಾಮಯ್ಯ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ಇತ್ತೀಚಿನ ದಿನಗಳಲ್ಲಿ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜಕೀಯವಾಗಿ ಸ್ವಲ್ಪ ಹಿನ್ನಡೆಯಾಗಿದೆ. ನಾವು ಚುನಾವಣೆಯಲ್ಲಿ ಸೋಲಬಹುದು, ಗೆಲ್ಲಬಹುದು. ಆದರೆ ಸೈದ್ಧಾಂತಿಕವಾಗಿ ಎಂದೂ ಸೋಲಬಾರದು. ಒಂದು ಪಕ್ಷ ಸೈದ್ಧಾಂತಿಕವಾಗಿ ಸೋತರೆ ಆ ಪಕ್ಷ ಚುನಾವಣೆಯನ್ನು ಗೆಲ್ಲಲಾಗದೆ ನಾಶವಾಗುತ್ತದೆ. ರಾಜ್ಯದ ಅಭಿವೃದ್ಧಿಯ ಜೊತೆಯಲ್ಲಿ ನಮ್ಮೆಲ್ಲರ ಮಾತೃ ಸ್ವರೂಪಿಯಾಗಿರುವ ಕಾಂಗ್ರೆಸ್ ಪಕ್ಷದ ಗತವೈಭವವನ್ನು ಮರಳಿ ಸ್ಥಾಪಿಸುವ ಹೊಣೆಗಾರಿಕೆ ಕೂಡಾ ನಮ್ಮೆಲ್ಲರ ಮೇಲಿದೆ’ ಎಂದು ಹೇಳಿದ್ದಾರೆ.

‘ಕಾಂಗ್ರೆಸ್ನ ಹಿರಿಯರು ತ್ಯಾಗ-ಬಲಿದಾನಗಳ ಮೂಲಕ ಕಟ್ಟಿದ ಸೌಹಾರ್ದ ಭಾರತವನ್ನು ಜಾತಿ-ಧರ್ಮಗಳ ಹೆಸರಲ್ಲಿ ಒಡೆದು ಹಾಕಲಾಗುತ್ತಿದೆ. ಸಂವಿಧಾನವನ್ನೇ ಪ್ರಶ್ನಿಸಲಾಗುತ್ತಿದೆ. ಗಾಂಧಿಯವರನ್ನು ಕೊಂದವರು ಇಂದು ಗೋಡ್ಸೆಯನ್ನು ಮೆರೆಸುತ್ತಿದ್ದಾರೆ. ಸಮಾನತೆ, ಸೌಹಾರ್ದ, ಸಾಮಾಜಿಕ ನ್ಯಾಯ ಮತ್ತು ಜಾತ್ಯತೀತ ಮೌಲ್ಯಗಳನ್ನು ತನ್ನ ಸಿದ್ಧಾಂತವಾಗಿ ಸ್ವೀಕರಿಸಿದ ಪಕ್ಷ ಕಾಂಗ್ರೆಸ್. ಈ ಪಕ್ಷವನ್ನು ಸೈದ್ಧಾಂತಿಕವಾಗಿ ತಳಮಟ್ಟದಿಂದಲೇ ಗಟ್ಟಿಗೊಳಿಸುವುದು ಮಾತ್ರವೇ ದೇಶವನ್ನು ಉಳಿಸಲು ನಮಗಿರುವ ಏಕೈಕ ದಾರಿ’ ಎಂದು ಸಲಹೆ ನೀಡಿದ್ದಾರೆ.

‘ಕಾಂಗ್ರೆಸ್ ಪಕ್ಷ ಇಂತಹ ಸವಾಲಿನ ಅನೇಕ ಅಗ್ನಿದಿವ್ಯಗಳನ್ನು ಯಶಸ್ವಿಯಾಗಿ ದಾಟಿ ಬಂದಿರುವ ಇತಿಹಾಸ ನಮಗೆಲ್ಲರಿಗೂ ಪ್ರೇರಣೆಯಾಗಲಿ. ನಿಮ್ಮ ನಾಯಕತ್ವ ಬಲ ಈ ಪ್ರಯತ್ನವನ್ನು ಸಫಲಗೊಳಿಸಲಿ. ಈ ಹೋರಾಟ ದಲ್ಲಿ ಇಡೀ ಶಾಸಕಾಂಗ ಪಕ್ಷವಲ್ಲದೆ, ರಾಜ್ಯದ ಏಳು ಕೋಟಿ ಜನರೂ ನಿಮ್ಮೊಂದಿಗೆ ಇರುತ್ತಾರೆ’ ಎಂದು ಹುರಿದುಂಬಿಸಿದ್ದಾರೆ.

‘ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವ ಹೊಣೆ’

‘ಇಡೀ ದೇಶ ಇಂದು ಆರ್ಥಿಕ ಅಭದ್ರತೆಯಲ್ಲಿ ಭೀತಿಗೊಳಗಾಗಿದ್ದು, ರಾಜ್ಯದ ಜನರೂ ತಮ್ಮ ಭವಿಷ್ಯದ ಬಗ್ಗೆ ಆತಂಕಿತರಾಗಿದ್ದಾರೆ. ಅವರಲ್ಲಿ ಭರವಸೆ ಹುಟ್ಟಿಸುವ ಜೊತೆಗೆ, ರಾಜ್ಯವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸುವ ಜವಾಬ್ದಾರಿ ನಿಮ್ಮ ಮೇಲಿದೆ’ ಎಂದು ಸಿದ್ದರಾಮಯ್ಯ ಅವರು ಶಿವಕುಮಾರ್ ಅವರಿಗೆ ಹೇಳಿದ್ದಾರೆ.

‘ಕರ್ನಾಟಕವು ತಲಾದಾಯ, ಸಂಪತ್ತು, ಅಧಿಕಾರ ಮತ್ತು ಅವಕಾಶಗಳ ಸಮಾನ ಹಂಚಿಕೆಯಲ್ಲಿ ದೇಶಕ್ಕೆ ಮಾದರಿ. ನಮ್ಮ ಪ್ರತಿಯೊಂದು ಯೋಜನೆಯನ್ನೂ ಉಳಿದ ರಾಜ್ಯಗಳು ಮಾದರಿಯಾಗಿ ಸ್ವೀಕರಿಸಿ ಅನುಷ್ಠಾನಕ್ಕೆ ತರುತ್ತಿರುವುದು ಹೆಮ್ಮೆಯ ಸಂಗತಿ. ಮುಖ್ಯಮಂತ್ರಿಯಾಗಿ ಕನ್ನಡಿಗರ ಸೇವೆಯನ್ನು ಮಾಡಲು ಒದಗಿಬಂದಿದ್ದ ಅವಕಾಶವನ್ನು ಬಳಸಿಕೊಂಡು ಕರ್ನಾಟಕವನ್ನು ಸಮೃದ್ಧ, ಸ್ವಾವಲಂಬಿ ಮತ್ತು ಸ್ವಾಭಿಮಾನಿ ರಾಜ್ಯವನ್ನಾಗಿ ಅಭಿವೃದ್ಧಿಪಡಿಸಿದ ಹೆಮ್ಮೆ ನನ್ನದು. ಈ ಅಭಿವೃದ್ಧಿಯ ಬಂಡಿಯನ್ನು ಮುಂದಕ್ಕೆ ಎಳೆದೊಯ್ಯವ ಜವಾಬ್ದಾರಿ ನಿಮ್ಮ ಹೆಗಲ ಮೇಲಿದೆ. ಅದಕ್ಕೆ ಬೇಕಾಗಿರುವ ಬದ್ಧತೆ, ಸಾಮರ್ಥ್ಯ ಮತ್ತು ಮುನ್ನೋಟ ನಿಮ್ಮಲ್ಲಿದೆ ಎನ್ನುವ ನಂಬಿಕೆ ನನ್ನದು’ ಎಂದಿದ್ದಾರೆ.

‘ನಿಮ್ಮಲ್ಲಿರುವ ಅದಮ್ಯವಾದ ಕ್ರಿಯಾಶೀಲತೆ, ಸಂಘಟನಾ ಚಾತುರ್ಯ ಮತ್ತು ಕಾಂಗ್ರೆಸ್ ಪಕ್ಷದ ಮೇಲಿನ ಸಂಶಯಾತೀತ ನಿಷ್ಠೆಯನ್ನು ಒಬ್ಬ ಸಹದ್ಯೋಗಿಯಾಗಿ ನಾನು ಸಮೀಪದಿಂದ ಗಮನಿಸಿದ್ದೇನೆ. ಇವೆಲ್ಲದರ ಸದುಪಯೋಗ ರಾಜ್ಯದ ಜನತೆಗೆ ಆಗಲಿ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.