ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಮಣ್ಣನವರೇ, ಸಂತೋಷ ಕೂಟದ ಪ್ರಯತ್ನಕ್ಕೆ ನೀವು 3ನೇ ಬಲಿಪಶು: ಕಾಂಗ್ರೆಸ್ ಲೇವಡಿ

Published 14 ಆಗಸ್ಟ್ 2023, 7:31 IST
Last Updated 14 ಆಗಸ್ಟ್ 2023, 7:31 IST
ಅಕ್ಷರ ಗಾತ್ರ

ಬೆಂಗಳೂರು: ಗೋವಿಂದರಾಜನಗರ ಕ್ಷೇತ್ರ ತೊರೆದು ಕಾಲ ಮೇಲೆ ಕಲ್ಲು ಹಾಕಿಕೊಂಡೆ ಎಂದು ಬಿಜೆಪಿ ಮುಖಂಡ ವಿ.ಸೋಮಣ್ಣ ಹೇಳಿಕೆ ಕುಡಿತು ಕಾಂಗ್ರೆಸ್ ಲೇವಡಿ ಮಾಡಿದೆ.

ಈ ಕುರಿತು ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಬರೆದುಕೊಂಡಿರುವ ಕಾಂಗ್ರೆಸ್, ‘ಸೋಮಣ್ಣ ಅವರೇ, ನಿಮ್ಮ ಕಾಲ ಮೇಲೆ ನೀವೇ ಕಲ್ಲು ಹಾಕಿಕೊಂಡಿದ್ದಾ, ಅಥವಾ ನಿಮ್ಮ ತಲೆಯ ಮೇಲೆ ಬೇರೆಯವರು ಕಲ್ಲು ಹಾಕಿದ್ದಾ?, ‘ಲಿಂಗಾಯತ ಮುಕ್ತ ಬಿಜೆಪಿ’ ಮಾಡುವ ಸಂತೋಷ ಕೂಟದ ಪ್ರಯತ್ನಕ್ಕೆ ನೀವು 3ನೇ ಬಲಿಪಶು ಆಗಿದ್ದಲ್ಲವೇ’ ಎಂದು ಪ್ರಶ್ನಿಸಿದೆ.

ಇತ್ತೀಚೆಗೆ ಸುದ್ದಿಗಾರರೊಂದಿಗೆ ಮಾತನಾಡಿದ್ದ ಸೋಮಣ್ಣ, ‘ನಾನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿರುವುದು ನಿಜ. ಅದು ಸಾಧ್ಯವಾಗದಿದ್ದರೆ ಕಾರ್ಯಾಧ್ಯಕ್ಷ ಸ್ಥಾನವನ್ನಾದರೂ ಕೊಡಲಿ’ ಎಂದು ಹೇಳಿದ್ದರು.

‘ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ನೀಡುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ಒತ್ತಾಯಿಸಿದ್ದೇನೆ. ಅವರಿಂದ ಈವರೆಗೂ ಪ್ರತಿಕ್ರಿಯೆ ಬಂದಿಲ್ಲ’ ಎಂದಿದ್ದರು.

‘ನನಗೆ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ನೀಡಿದರೆ ಮಜವೇ ಬೇರೆ ಇರುತ್ತದೆ. ಕಾಂಗ್ರೆಸ್‌ ಪಕ್ಷದಲ್ಲಿ ಕಾರ್ಯಾಧ್ಯಕ್ಷರನ್ನು ನೇಮಿಸುವ ಪದ್ಧತಿ ಇದೆ. ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ಕೊಡಲಾಗದಿದ್ದರೆ ಕಾಂಗ್ರೆಸ್‌ ಪಕ್ಷದ ಮಾದರಿಯಲ್ಲಿ ಕಾರ್ಯಾಧ್ಯಕ್ಷ ಹುದ್ದೆಗೆ ನೇಮಕ ಮಾಡಲಿ’ ಎಂದು ಹೇಳಿದ್ದರು.

‘ಸೋಮಣ್ಣ ಅವರು ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರೆ’ ಎಂಬ ಕುರಿತು ಪ್ರತಿಕ್ರಿಯಿಸಿದ್ದ ಅವರು, ‘40 ವರ್ಷಗಳಿಂದ ರಾಜಕಾರಣದಲ್ಲಿ ಸಕ್ರಿಯವಾಗಿದ್ದೇನೆ. ಸುಮ್ಮನೆ ಕೂರುವವನಲ್ಲ. ಸಮಯ ಬಂದಾಗ ನೋಡೋಣ’ ಎಂದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT