ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದಂತೆ ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 31 ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ಅವಧಿಪೂರ್ವ ಬಿಡುಗಡೆಗೆ ರಾಜ್ಯ ಸರ್ಕಾರ ಆದೇಶಿಸಿದೆ.

ಸನ್ನಡತೆಯ ಆಧಾರದಲ್ಲಿ ಕೈದಿಗಳ ಬಿಡುಗಡೆಗೆ ಜ.8ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿ, ರಾಜ್ಯಪಾಲರ ಕಚೇರಿಗೆ ಪ್ರಸ್ತಾವ ಸಲ್ಲಿಸಲಾಗಿತ್ತು. 31 ಮಂದಿ ಬಿಡುಗಡೆಗೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ.

ಕಾರಾಗೃಹಗಳ ಸಲಹಾ ಮಂಡಳಿ ಸಭೆಯ ತೀರ್ಮಾನದಂತೆ ರಾಜ್ಯದ ವಿವಿಧ ಕಾರಾಗೃಹಗಳಲ್ಲಿರುವ 54 ಮಂದಿ ಜೀವಾವಧಿ ಶಿಕ್ಷೆ ಬಂದಿಗಳನ್ನು ಅವಧಿ ಪೂರ್ವ ಬಿಡುಗಡೆಗೆ ಪ್ರಸ್ತಾವ ಸಲ್ಲಿಸಲಾಗಿತ್ತು. ಆ ಪೈಕಿ, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ (ಬೆಂಗಳೂರು) 14, ಮೈಸೂರು 2, ಬೆಳಗಾವಿ 2, ಕಲಬುರಗಿಯ 2, ಶಿವಮೊಗ್ಗ 1, ಶಿವಮೊಗ್ಗದಲ್ಲಿರುವ ಮಹಿಳಾ ಕಾರಾಗೃಹ 1, ವಿಜಯಪುರ 5, ಬಳ್ಳಾರಿ 3, ಧಾರವಾಡದ ಒಬ್ಬರನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.