ಸುವರ್ಣ ವಿಧಾನಸೌಧ(ಬೆಳಗಾವಿ): ಖಾಸಗಿ ವೈದ್ಯಕೀಯ ಸಂಸ್ಥೆಗಳ ವ್ಯಾಪ್ತಿಯ ಒಳಗೆ ‘ಮಾನಸಿಕ ಆರೋಗ್ಯ ಸಂಸ್ಥೆ’ಯನ್ನೂ ಸೇರಿಸಲು ಹಾಗೂ ವೈದ್ಯಕೀಯ ಸಂಸ್ಥೆಗಳಿಗೆ ಆರು ತಿಂಗಳ ಅವಧಿಗೆ ತಾತ್ಕಾಲಿಕ ನೋಂದಣಿ ಪ್ರಮಾಣಪತ್ರ ನೀಡಲು ಅವಕಾಶ ಕಲ್ಪಿಸುವ ‘ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ಮಸೂದೆ– 2025’ಕ್ಕೆ ವಿಧಾನಸಭೆ ಗುರುವಾರ ಅಂಗೀಕಾರ ನೀಡಿತು.

ಮಸೂದೆ ಮಂಡಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ‘ನೋಂದಣಿ ಮತ್ತು ಕುಂದುಕೊರತೆ ಪ್ರಾಧಿಕಾರಕ್ಕೆ ಭಾರತೀಯ ವೈದ್ಯಕೀಯ ಸಂಘದ ಒಬ್ಬ ಮತ್ತು ನೋಂದಾಯಿತ ಖಾಸಗಿ ವೈದ್ಯಕೀಯ ಅಥವಾ ಆಯುಷ್ ವೈದ್ಯಕೀಯ ವೃತ್ತಿನಿರತರ ಸಂಘವನ್ನು ಪ್ರತಿನಿಧಿಸುವ ಒಬ್ಬನನ್ನು ಸದಸ್ಯನಾಗಿ ನಾಮನಿರ್ದೇಶನ ಮಾಡಲು ಈ ಮಸೂದೆ ಅವಕಾಶ ಮಾಡಿಕೊಡಲಿದೆ’ ಎಂದರು.

‘ಖಾಸಗಿ ವೈದ್ಯಕೀಯ ಸಂಸ್ಥೆಗಳು ತಾತ್ಕಾಲಿಕ ನೋಂದಣಿ ಪ್ರಮಾಣಪತ್ರ ಪಡೆದ ಆರು ತಿಂಗಳ ಒಳಗೆ ಎಲ್ಲ 17 ಷರತ್ತುಗಳನ್ನು ಪೂರೈಸಿದರೆ ಮಾತ್ರ ಶಾಶ್ವತ ಪ್ರಮಾಣಪತ್ರ ನೀಡಲಾಗುವುದು. ಅವಧಿ ಮುಗಿದ ಮುಗಿದ 90 ದಿನಗಳ ಒಳಗೆ ಪ್ರಮಾಣಪತ್ರವನ್ನು ನವೀಕರಿಸಿಕೊಳ್ಳಬೇಕು. ಯಾವುದೇ ಅಪಘಾತ ಸಂಭವಿಸಿದರೆ ವೈದ್ಯಕೀಯ ವರದಿಯನ್ನು ಪೋರ್ಟಲ್ಗೆ ಅಪ್ಲೋಡ್ ಮಾಡಲು ಹಾಗೂ ಯಾವುದಾದರೂ ಅಧಿಕೃತ ಮಾನ್ಯತಾ ಸಂಸ್ಥೆಯಿಂದ ಮಾನ್ಯತಾ ಪ್ರಮಾಣಪತ್ರ ತಂದರೆ ಅರ್ಜಿ ಸಲ್ಲಿಸಿದ 10 ದಿನಗಳಲ್ಲಿ ಯಾವುದೇ ತಪಾಸಣೆ ಇಲ್ಲದೆ ನೋಂದಣಿ ಅಥವಾ ನವೀಕರಣಕ್ಕೆ ಮಂಜೂರು ಮಾಡಲು ಕೂಡಾ ಈ ತಿದ್ದುಪಡಿ ಮಸೂದೆ ಅವಕಾಶ ಮಾಡಿಕೊಡಲಿದೆ’ ಎಂದರು.

ಈ ವೇಳೆ ಮಾತನಾಡಿದ ಡಾ. ಎನ್.ಟಿ. ಶ್ರೀನಿವಾಸ್, ಬಿಜೆಪಿಯ ಶೈಲೇಂದ್ರ ಬೆಳ್ದಾಲೆ, ಎಸ್. ಸುರೇಶ್ಕುಮಾರ್, ಡಾ. ಸಿ.ಎನ್. ಅಶ್ವತ್ಥನಾರಾಯಣ ಮತ್ತಿತರರು, ಸಣ್ಣ ಕ್ಲಿನಿಕ್ಗಳಿಗೆ ಅಗ್ನಿ ಸುರಕ್ಷತಾ ಪ್ರಮಾಣಪತ್ರ ಪಡೆಯಬೇಕೆಂಬ ನಿಯಮ ಸಡಿಲಿಸುವಂತೆ ಮನವಿ ಮಾಡಿದರು. ‘ಈ ಪ್ರಮಾಣಪತ್ರ ಕೊಡುವ ವಿಚಾರವು ಗೃಹ ಇಲಾಖೆಗೆ ಸಂಬಂಧಿಸಿದ್ದು, ಈಗಾಗಲೇ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದೇನೆ’ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.