ಶನಿವಾರ, 25 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿ ಕ್ಷೇತ್ರಕ್ಕೆ ತಲಾ 4 ಪಬ್ಲಿಕ್ ಶಾಲೆ

Last Updated 23 ಫೆಬ್ರುವರಿ 2019, 19:47 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ತಲಾ ನಾಲ್ಕು ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು(ಕೆಪಿಎಸ್‌) ತೆರೆಯಲು ಶಿಕ್ಷಣ ಇಲಾಖೆಯಲ್ಲಿ ಚಿಂತನೆ ನಡೆದಿದೆ.

ಒಂದೇ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಒಂದನೇ ತರಗತಿಯಿಂದ 12ನೇ ತರಗತಿ ವರೆಗೆ ಕನ್ನಡ ಮತ್ತು ಇಂಗ್ಲಿಷ್‌ ಮಾಧ್ಯಮದಲ್ಲಿ ಓದುವ ಅವಕಾಶ ಈ ಶಾಲೆಗಳಲ್ಲಿ ಇರಲಿದೆ.

‘ನಗರ ಪ್ರದೇಶದ ಕ್ಷೇತ್ರಗಳಲ್ಲಿ ಖಾಸಗಿ ಶಾಲೆಗಳು ಹೆಚ್ಚಿರುತ್ತವೆ ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇರುತ್ತದೆ. ಆದ್ದರಿಂದ, ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಕೆಪಿಎಸ್‌ಗಳನ್ನು ತೆರೆಯಬೇಕು ಎನ್ನುವ ಬಗ್ಗೆ ಚರ್ಚೆ ನಡೆಯುತ್ತಿವೆ. ಇಂತಹ ಶಾಲೆಗಳನ್ನು ತಮ್ಮ ಕ್ಷೇತ್ರಗಳಲ್ಲಿ ರೂಪಿಸಲು ಎಲ್ಲ ಶಾಸಕರು ಉತ್ಸುಕರಾಗಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT