'ಬೆಂಗಳೂರು ಬಳಿ ಕ್ಯು- ಸಿಟಿ (ಕ್ವಾಂಟಮ್) ನಗರ ಸ್ಥಾಪಿಸಿ ವಿಶ್ವ ದರ್ಜೆಯ ಸೌಲಭ್ಯ ಒದಗಿಸಲಾಗುವುದು’ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಹೇಳಿದರು. ಕೇಂದ್ರ ಸರ್ಕಾರವು ₹6 ಸಾವಿರ ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಕ್ವಾಂಟಮ್ ಮಿಷನ್ (ಎನ್‌ಕ್ಯುಎಂ) ಆರಂಭಿಸಿದ್ದು ಕರ್ನಾಟಕದ ನೇತೃತ್ವದಲ್ಲಿ ನಾವೀನ್ಯತೆ ಮತ್ತು ವಿಕೇಂದ್ರೀಕೃತ ವಿಧಾನಗಳನ್ನು ಅಳವಡಿಸಿಕೊಳ್ಳಲು ಅನುಮತಿ ನೀಡಬೇಕು ಎಂದು ಕೇಂದ್ರಕ್ಕೆ ಮನವಿ ಮಾಡಿದರು.