ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಂಗಳವಾರ ಸಂಜೆ ಧಾರಾಕಾರ ಮಳೆ ಸುರಿಯಿತು. ದಿನವಿಡೀ ಮೋಡ ಕವಿದ ವಾತಾವರಣ ಇತ್ತು. ಸಂಜೆ 5.30 ಸುಮಾರಿಗೆ ಶುರುವಾದ ಮಳೆ ಸುಮಾರು ಒಂದು ಗಂಟೆ ಕಾಲ ನಿರಂತರವಾಗಿ ಸುರಿಯಿತು. ಜಿಲ್ಲೆಯ ಗ್ರಾಮಾಂತರ ಭಾಗಗಳಲ್ಲೂ ವ್ಯಾಪಕವಾಗಿ ಮಳೆಯಾಯಿತು.

ಚಿಕ್ಕಮಗಳೂರು ಜಿಲ್ಲೆಯಲ್ಲಿ, ಚಿಕ್ಕಮಗಳೂರು ನಗರ, ಮೂಡಿಗೆರೆ, ಕೊಟ್ಟಿಗೆಹಾರ, ಜಾವಳಿ, ಕಳಸ, ಬಾಳೆಹೊನ್ನೂರು ಸೇರಿ ಹಲವೆಡೆ ಮಧ್ಯಾಹ್ನದ ನಂತರ ಮಳೆ ಸುರಿಯಿತು.

ವಿದ್ಯುತ್ ಕಂಬಗಳು ಧರೆಗೆ: (ಮೈಸೂರು ವರದಿ): ಮೈಸೂರು, ಕೊಡಗು, ಚಾಮರಾಜನಗರ, ಹಾಸನ ಹಾಗೂ ಮಂಡ್ಯ ಜಿಲ್ಲೆಗಳ ವಿವಿಧೆಡೆ ಮಂಗಳವಾರ ಸಾಧಾರಣ ಮಳೆಯಾಯಿತು.

ಮೈಸೂರು ನಗರವೂ ಸೇರಿದಂತೆ ತಾಲ್ಲೂಕಿನ ವಿವಿಧೆಡೆ, ಪಿರಿಯಾಪಟ್ಟಣ ಮತ್ತು ನಂಜನಗೂಡು ತಾಲ್ಲೂಕಿನಲ್ಲಿ ಚದುರಿದಂತೆ ಮಳೆಯಾಯಿತು. ಚಾಮರಾಜನಗರ ಜಿಲ್ಲೆಯಾದ್ಯಂತ ಒಂದೂವರೆ ತಾಸು ಉತ್ತಮ ಮಳೆಯಾಗಿದೆ. ಮಂಡ್ಯ ಜಿಲ್ಲೆಯ ಹಲವೆಡೆ ತುಂತುರು ಮಳೆ ಬಿದ್ದಿತು. ಪಾಂಡವಪುರದಲ್ಲಿ ಬಿರುಗಾಳಿ, ಮಳೆಗೆ ಹತ್ತಾರು ಮರಗಳು ಹಾಗೂ 16ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿವೆ. ತೋಟಗಾರಿಕೆ ಇಲಾಖೆ ಕಚೇರಿ ಸಮೀಪ ಮರ ಬಿದ್ದು ಕಾರು ಜಖಂಗೊಂಡಿತು. ಹಾಸನ ಜಿಲ್ಲೆಯ ಹಳೇಬೀಡು ಹಾಗೂ ಸುತ್ತಮುತ್ತ 40 ನಿಮಿಷ ಮಳೆ ಸುರಿಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-51-48213527

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.