ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದೆ. ಹಾಸನ, ಕೊಡಗು, ಮೈಸೂರು ಮತ್ತು ಚಿತ್ರದುರ್ಗ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.