ಬೆಂಗಳೂರು: ರಾಜ್ಯದ ಕೆಲವೆಡೆ ಮುಂದಿನ ಒಂದು ವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಬಗ್ಗೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ಸೋಮವಾರದಿಂದ ನಾಲ್ಕು ದಿನಗಳು ‘ಯೆಲ್ಲೊ ಅಲರ್ಟ್’ ಘೋಷಿಸಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಯ ಒಂದು ಅಥವಾ ಎರಡು ಸ್ಥಳದಲ್ಲಿ ಸಾಧಾರಣ ಮಳೆಯಾಗುವ ಸಂಭವವಿದ್ದು, ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಒಂದೆರಡು ಸ್ಥಳದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಮಂಗಳವಾರದಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.