ಕಲಬುರಗಿ/ಹುಬ್ಬಳ್ಳಿ: ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ವಿವಿಧೆಡೆ ಬುಧವಾರ ಉತ್ತಮ ಮಳೆಯಾಗಿದೆ. ಕೆಲವೆಡೆ ಆಲಿಕಲ್ಲು ಮಳೆಯಾಗಿದ್ದು, ಅಲ್ಲಲ್ಲಿ ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದೆ.

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಐನಾಪುರ, ಗಡಿಲಿಂಗದಹಳ್ಳಿ, ಚಂದನಕೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧೆಡೆ ಸಂಜೆ 1 ಗಂಟೆ ಕಾಲ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಿದೆ.

ಕೊಪ್ಪಳ ಜಿಲ್ಲೆಯ ಕುಕನೂರು ತಾಲ್ಲೂಕಿನಲ್ಲೂ ಆಲಿಕಲ್ಲು ಮಳೆಯಾಗಿದೆ. ಕುಷ್ಟಗಿ ತಾಲ್ಲೂಕಿನ ಹನುಮಸಾಗರ ಭಾಗದಲ್ಲಿಯೂ ಮಳೆ ಸುರಿದಿದೆ.

ಬೀದರ್ ಜಿಲ್ಲೆಯ ಹುಲಸೂರಿನಲ್ಲಿ ಬುಧವಾರ ಅರ್ಧ ಗಂಟೆಗೂ ಹೆಚ್ಚು ಸಮಯ ಮಳೆಯಾಗಿದೆ.

ಕಿತ್ತೂರು ಕರ್ನಾಟಕ; ಬಿರುಸಿನ ಮಳೆ

ಹುಬ್ಬಳ್ಳಿ ವರದಿ: ಹುಬ್ಬಳ್ಳಿ–ಧಾರವಾಡ, ಹಾವೇರಿ, ಬೆಳಗಾವಿ ಸೇರಿ ಕಿತ್ತೂರು ಕರ್ನಾಟಕದ ವಿವಿಧೆಡೆ ಬುಧವಾರವೂ ಬಿರುಸುನಿಂದ ಮಳೆ ಸುರಿಯಿತು.

ಹುಬ್ಬಳ್ಳಿಯಲ್ಲಿ ಮೇಲ್ಸೇತುವೆ ಕಾಮಗಾರಿಗಾಗಿ ರಸ್ತೆ ಅಗೆದಿರುವ ಕಡೆ ನೀರು ನಿಂತು ಸಂಚಾರಕ್ಕೆ ಅಡಚಣೆ ಉಂಟಾಯಿತು. ಕೆ.ಸಿ ಪಾರ್ಕ್ ಬಳಿ ಅರಣ್ಯ ಇಲಾಖೆ ಕಚೇರಿ ಪಕ್ಕ ಮರವೊಂದು ಉರುಳಿತು.

ಹಾವೇರಿ ತಾಲ್ಲೂಕಿನ ಕಳ್ಳಿಹಾಳ ಗ್ರಾಮದಲ್ಲಿ ಮಂಗಳವಾರ ಮಳೆ ಸುರಿದ ವೇಳೆ ವೃದ್ಧ ಫಕೀರಪ್ಪ ಅವರು ಶಂಕಾಸ್ಪದವಾಗಿ ಮೃತಪಟ್ಟಿದ್ದು, ಸಿಡಿಲು ಬಡಿದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ವಿಜಯಪುರ ನಗರ, ದೇವರ ಹಿಪ್ಪರಗಿ, ಮುದ್ದೇಬಿಹಾಳ ಪಟ್ಟಣದ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಹಾಗೂ ತಿಕೋಟಾ ತಾಲ್ಲೂಕಿನ ಬಾಬಾ ನಗರ ಸೇರಿ ವಿವಿಧೆಡೆ ಬುಧವಾರ ಸಂಜೆ ಧಾರಾಕಾರ ಮಳೆಯಾಗಿದೆ.

ತಿಕೋಟಾ ತಾಲ್ಲೂಕಿನ ಕೊಟ್ಯಾಳ ರಸ್ತೆಯಲ್ಲಿನ ಸೋಮನಿಂಗ ಬಸಪ್ಪ ಬಾಗಲಕೋಟ ಅವರಿಗೆ ಸೇರಿದ ಕಟಾವಿಗೆ ಬಂದಿದ್ದ ನಾಲ್ಕು ಎಕರೆ ಹಣ್ಣಾದ ದ್ರಾಕ್ಷಿ ಪಡ ನೆಲಕಚ್ಚಿದೆ. ಬಾಬಾನಗರ ಗ್ರಾಮದ ರೈತ ಶಿವಾನಂದ ಚಂದ್ರಪ್ಪ ನಾವಿ ಅವರ ಮೂರು ಟನ್ಗೂ ಅಧಿಕ ಒಣದ್ರಾಕ್ಷಿ ತೊಯ್ದು ಹೋಗಿದೆ.

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲ್ಲೂಕಿನಲ್ಲಿ ಕಳೆದೆರಡು ದಿನಗಳಿಂದ ಸುರಿದ ಆಲಿಕಲ್ಲು ಮಳೆಗೆ ಗೋವಿನಜೋಳ ಬೆಳೆ ಹಾನಿಯಾಗಿದೆ. ಬೆಳಗಾವಿ ಮತ್ತು ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ತೋರಣಗಲ್ಲು ಹೋಬಳಿಯ ಕೆಲ ಗ್ರಾಮಗಳಲ್ಲಿ ಆಲಿಕಲ್ಲು ಸಹಿತ ಉತ್ತಮ ಮಳೆ ಸುರಿಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.