ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Rains: ಭಾಗಮಂಡಲ, ಖಾನಾಪುರದಲ್ಲಿ ಮಳೆ

Published 7 ಏಪ್ರಿಲ್ 2024, 23:30 IST
Last Updated 7 ಏಪ್ರಿಲ್ 2024, 23:30 IST
ಅಕ್ಷರ ಗಾತ್ರ

ನಾಪೋಕ್ಲು (ಕೊಡಗು ಜಿಲ್ಲೆ): ಸಮೀಪದ ಭಾಗಮಂಡಲ ವ್ಯಾಪ್ತಿಯಲ್ಲಿ ಭಾನುವಾರ ಪ್ರಸಕ್ತ ಬೇಸಿಗೆಯ ಮೊದಲ ಮಳೆ ಸುರಿದು ತಂಪೆರೆಯಿತು.

ತಲಕಾವೇರಿ, ಚೇರಂಗಾಲ, ಭಾಗಮಂಡಲ, ಸಣ್ಣಪುಲಿಕೋಟು, ಅಯ್ಯಂಗೇರಿ ಭಾಗಗಳಲ್ಲಿ ಉತ್ತಮ ಮಳೆ ಸುರಿದಿದ್ದು, ಬೆಳೆಗಾರರಲ್ಲಿ ಮಂದಹಾಸ ಮೂಡಿಸಿದೆ.

ಖಾನಾಪುರ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಬೀಡಿ, ಹಿಂಡಲಗಿ ಹಾಗೂ ಅಕ್ಕಪಕ್ಕದ  ಪ್ರದೇಶಗಳಲ್ಲಿ ಭಾನುವಾರ ಸಂಜೆ ಕೆಲಕಾಲ ಸಾಧಾರಣ ಮಳೆ ಸುರಿದಿದೆ.

ಸುಮಾರು ಹದಿನೈದು ನಿಮಿಷಗಳ ಕಾಲ ಮಳೆಯಾಗಿದ್ದು, ಬಿಸಿಲಿನ ಝಳದಿಂದ ಬಸವಳಿದಿದ್ದ ಜನರಿಗೆ ಈ ಮಳೆ ಕೊಂಚ ನೆಮ್ಮದಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT