ಬೆಂಗಳೂರು: ಉತ್ತರ ಕನ್ನಡ, ಕೊಪ್ಪಳ, ಚಿಕ್ಕಮಗಳೂರು ಸೇರಿದಂತೆ 14 ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮೇ 12ರಂದು ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಗುಡುಗು ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳು, ಕರಾವಳಿ ಕರ್ನಾಟಕದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ, ದಕ್ಷಿಣ ಕರ್ನಾಟಕದ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಳೆಯಾಗಬಹುದು ಎಂದು ಇಲಾಖೆ ಮುಖ್ಯಸ್ಥರು ತಿಳಿಸಿದ್ದಾರೆ.

ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಭಾಗದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.