ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ 5 ಜಿಲ್ಲೆಗಳಿಗೆ 3 ದಿನ ‘ರೆಡ್‌ ಅಲರ್ಟ್’

Last Updated 3 ಆಗಸ್ಟ್ 2022, 21:31 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ ಮುಂದುವರೆಯಲಿದ್ದು, ಉತ್ತರ ಕನ್ನಡ ಸೇರಿ ಐದು ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ರೆಡ್‌ ಅಲರ್ಟ್’ ಘೋಷಿಸಿದೆ.

ಶುಕ್ರವಾರ ಬೆಳಗಿನವರೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗೆ ಮುಂದಿನ ಮೂರು ದಿನಗಳು ‘ರೆಡ್ ಅಲರ್ಟ್’ ನೀಡಲಾಗಿದೆ. ಶಿವಮೊಗ್ಗಕ್ಕೆ ‘ಆರೆಂಜ್ ಅಲರ್ಟ್’ ಹಾಗೂ ಬೀದರ್, ಕಲಬುರ್ಗಿ ಸೇರಿ 10 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.

ಕರಾವಳಿಯ ಎಲ್ಲ ಜಿಲ್ಲೆಗಳು, ಬಳ್ಳಾರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ ಹಾಗೂ ವಿಜಯಪುರ, ದಕ್ಷಿಣ ಒಳನಾಡಿನಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಹಾಗೂ ರಾಮನಗರ ಜಿಲ್ಲೆಯಲ್ಲಿ ಒಂದೆರಡು ಕಡೆ ಗುರುವಾರ ಭಾರಿ ಮಳೆಯಾಗಲಿದೆ.

ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 50 ಕಿ.ಮೀ.ನಿಂದ 60 ಕಿ.ಮೀ. ತಲುಪುವ ಸಾಧ್ಯತೆಯಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ತೆರಳಬಾರದು ಎಂದು
ಸೂಚಿಸಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT