ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಮಂಗಳವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಿತು. ರಾಜ್ಯದ ಒಟ್ಟು 223 ಶಾಸಕರ ಪೈಕಿ 222 ಶಾಸಕರು ಮತದಾನ ಮಾಡಿದರು. ಕಾಂಗ್ರೆಸ್ ಪಕ್ಷದ 135 ಶಾಸಕರು, ಮೂವರು ಪಕ್ಷೇತರ ಶಾಸಕರು, ಬಿಜೆಪಿಯ 65 ಶಾಸಕರು, ಜೆಡಿಎಸ್‌ನ 19 ಶಾಸಕರು ಮತದಾನದಲ್ಲಿ ಪಾಲ್ಗೊಂಡರು.