ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕನ್ನಡ ರಾಜ್ಯೋತ್ಸವಕ್ಕೆ ಕರ್ನಾಟಕದಜನತೆಗೆ ಶುಭಾಶಯ ಕೋರಿದ್ದಾರೆ.
64ನೇ ಕನ್ನಡರಾಜ್ಯೋತ್ಸವದ ಈ ವಿಶೇಷ ಸಂದರ್ಭದಲ್ಲಿ ಕನ್ನಡಿಗರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ನರೇಂದ್ರ ಮೋದಿ ಕನ್ನಡದಲ್ಲೇ ಶುಭಾಶಯ ಕೋರಿ ಟ್ವೀಟ್ ಮಾಡಿದ್ದಾರೆ.
ಕರ್ನಾಟಕದ ಜನತೆಗೆ ಹಾರ್ದಿಕಅಭಿನಂದನೆಗಳುಮುಂಬರುವ ವರ್ಷಗಳಲ್ಲಿಕರ್ನಾಟಕ ರಾಜ್ಯ ಹಾಗೂ ನಮ್ಮ ದೇಶವು ಇನ್ನೂ ಉನ್ನತ ಮಟ್ಟಕ್ಕೇರಲಿ ಎಂದು ರಾಮನಾಥ್ ಕೋವಿಂದ್ ಟ್ವೀಟ್ ಮಾಡಿದ್ದಾರೆ.
ಕರ್ನಾಟಕ ರಾಜ್ಯೋತ್ಸವದ ಈ ದಿನದಂದು, ಕರ್ನಾಟಕದ ಜನತೆಗೆ ಹಾರ್ಧಿಕ ಅಭಿನಂದನೆಗಳು ಹಾಗೂ ಶುಭಾಶಯಗಳು. ಮುಂಬರುವ ವರ್ಷಗಳಲ್ಲಿ, ಕರ್ನಾಟಕ ರಾಜ್ಯ ಹಾಗೂ ನಮ್ಮ ದೇಶವು ಇನ್ನೂ ಉನ್ನತ ಮಟ್ಟಕ್ಕೇರಲಿ — ರಾಷ್ಟ್ರಪತಿ ಕೊವಿಂದ್.
ರಾಷ್ಟ್ರದ ಬೆಳವಣಿಗೆಗೆ ಕರ್ನಾಟಕ ನೀಡಿದ ಅತ್ಯುನ್ನತ ಕೊಡುಗೆಯನ್ನು ಆಚರಣೆ ಮಾಡುವ ದಿವಸವೇ ಕರ್ನಾಟಕ ರಾಜ್ಯೋತ್ಸವ. ರಾಜ್ಯದಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ರಾಷ್ಟ್ರದ ಬೆಳವಣಿಗೆಗೆ ಕರ್ನಾಟಕ ನೀಡಿದ ಅತ್ಯುನ್ನತ ಕೊಡುಗೆಯನ್ನು ಆಚರಣೆ ಮಾಡುವ ದಿವಸವೇ ಕರ್ನಾಟಕ ರಾಜ್ಯೋತ್ಸವ. ಕನ್ನಡಿಗರ ವಿಶಾಲ ಹೃದಯವಂತಿಕೆ ಹಾಗೂ ಕನ್ನಡ ನಾಡಿನ ಸೌಂದರ್ಯ ಹೆಸರುವಾಸಿಯಾದದ್ದು. ಬರುವ ದಿನಗಳಲ್ಲಿ ಕರ್ನಾಟಕದ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ.