ಬೆಂಗಳೂರು: ರಾಜ್ಯದಲ್ಲಿ ಪ್ರತಿ ವರ್ಷ ಸಂಭವಿಸುವ ರಸ್ತೆ ಅಪಘಾತಗಳು ಮತ್ತು ಅವುಗಳಿಂದಾಗುವ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುತ್ತಲೇ ಇದೆ. 2024 ರಲ್ಲಿ ಅತಿಹೆಚ್ಚು ರಸ್ತೆ ಅಪಘಾತಗಳು ಸಂಭವಿಸಿದ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕವು ನಾಲ್ಕನೇ ಸ್ಥಾನದಲ್ಲಿದೆ.

ರಾಜ್ಯದಲ್ಲಿ, 2024ರ ಅವಧಿಯಲ್ಲಿ ಒಟ್ಟು 43,062 ರಸ್ತೆ ಅಪಘಾತಗಳು ಸಂಭವಿಸಿದ್ದು, ಒಟ್ಟು 12,339 ಮಂದಿ ಜೀವ ಕಳೆದುಕೊಂಡಿದ್ದಾರೆ. 2020ಕ್ಕೆ ಹೋಲಿಸಿದರೆ ನಂತರದ ನಾಲ್ಕೂ ವರ್ಷಗಳಲ್ಲಿ ರಸ್ತೆ ಅಪಘಾತದಲ್ಲಿನ ಸಾವಿನ ಸಂಖ್ಯೆ ಏರುಗತಿಯಲ್ಲಿಯೇ ಇದೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ ಈಚೆಗೆ ಬಿಡುಗಡೆ ಮಾಡಿರುವ ‘ಭಾರತದಲ್ಲಿ ಅಪಘಾತ ಮತ್ತು ಆತ್ಮಹತ್ಯಾ ಸಾವುಗಳು–2024’ ವರದಿಯಲ್ಲಿ ಈ ಮಾಹಿತಿ ಇದೆ.

2024ರಲ್ಲಿ ದೇಶದಾದ್ಯಂತ ಒಟ್ಟು 4.67 ಲಕ್ಷ ರಸ್ತೆ ಅಪಘಾತಗಳು ಸಂಭವಿಸಿವೆ. ತಮಿಳುನಾಡಿನಲ್ಲಿ 67,526, ಮಧ್ಯಪ್ರದೇಶದಲ್ಲಿ 55,711, ಕೇರಳದಲ್ಲಿ 46,591 ಅತಿಹೆಚ್ಚು ಅಪಘಾತಗಳು ನಡೆದಿವೆ. ಕರ್ನಾಟಕವು ನಂತರದ ಸ್ಥಾನದಲ್ಲಿದೆ.

ರಾಜ್ಯದಲ್ಲಿ, ಅತಿವೇಗದಿಂದ ಸಂಭವಿಸಿದ ಅಪಘಾತಗಳಲ್ಲೇ 10,614 ಮಂದಿ ಮೃತಪಟ್ಟಿದ್ದಾರೆ ಎಂಬ ಅಂಶ ಈ ವರದಿಯಲ್ಲಿ ಇದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತಗಳಿಗೆ 4,145 ಮಂದಿ, ಎಕ್ಸ್ಪ್ರೆಸ್ವೇಗಳಲ್ಲಿನ ಅಪಘಾತಗಳಿಗೆ 108 ಮಂದಿ ಬಲಿಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.