ಇದೇ ಅವಧಿಯಲ್ಲಿ ರಾಜ್ಯದಲ್ಲಿ 28,869 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 548 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 23,35,524 ಕ್ಕೆ ಏರಿಕೆಯಾಗಿದೆ. ಆ ಪೈಕಿ 23,854 ಮಂದಿ ಸಾವಿಗೀಡಾಗಿದ್ದಾರೆ. ಸೋಂಕು ಕಾಣಿಸಿಕೊಂಡಾಗಿನಿಂದ ಇದುವರೆಗೆ 17,76,695 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 5,34,954 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇಂದು 9,409 ಹೊಸ ಪ್ರಕರಣಗಳು ವರದಿಯಾಗಿದ್ದು, 289 ಮಂದಿ ಮೃತಪಟ್ಟಿದ್ದಾರೆ. ಉಳಿದಂತೆ ಮೈಸೂರು 1,879 ತುಮಕೂರು 1,796, ಬಳ್ಳಾರಿ 1,109, ಬೆಳಗಾವಿ 948, ಚಿಕ್ಕಮಗಳೂರು 945, ದಕ್ಷಿಣ ಕನ್ನಡ 926, ಉಡುಪಿ ಜಿಲ್ಲೆಯಲ್ಲಿ 809 ಹೊಸ ಪ್ರಕರಣಗಳು ಪತ್ತೆಯಾಗಿವೆ.