ಸುವರ್ಣ ವಿಧಾನಸೌಧ (ಬೆಳಗಾವಿ): ದಂಡದ ಮೊತ್ತವನ್ನು ಹೆಚ್ಚಿಸಿ, ಜೈಲು ಶಿಕ್ಷೆಯನ್ನು ಕೈಬಿಡುವ ಉದ್ದೇಶದ ಕರ್ನಾಟಕ ಬಾಡಿಗೆ (ತಿದ್ದುಪಡಿ) ಮಸೂದೆಗೆ ವಿಧಾನಸಭೆ ಅಂಗೀಕಾರ ನೀಡಿತು.

ಮಸೂದೆಯ ಉದ್ದೇಶ ವಿವರಿಸಿದ ಕಂದಾಯ ಸಚಿವ ಕೃಷ್ಣಬೈರೇಗೌಡ, ‘ಕೇಂದ್ರ ಸರ್ಕಾರದ ರೂಪಿಸಿದ ಮಾದರಿ ಮಸೂದೆಗೆ ಕೆಲವು ಸರಳ ತಿದ್ದುಪಡಿ ಮಾಡಲಾಗಿದೆ. ಮೂಲ ಮಸೂದೆಯಲ್ಲಿ ಕಾನೂನು ಉಲ್ಲಂಘಿಸಿದರೆ ಜೈಲು ಶಿಕ್ಷೆ ವಿಧಿಸುವ ಅವಕಾಶವಿತ್ತು. ಅದನ್ನು ಕೈಬಿಡಲಾಗಿದೆ’ ಎಂದು ಹೇಳಿದರು.

ಮಸೂದೆಯ ಕುರಿತು ಮಾತನಾಡಿದ ಬಿಜೆಪಿಯ ಸುರೇಶ್ ಕುಮಾರ್, ಸಣ್ಣಪುಟ್ಟ ಬಾಡಿಗೆದಾರರು ಶೋಷಣೆ ಒಳಗಾಗಿದ್ದಾರೆ. ಅದನ್ನು ತಡೆಯಲು ಮಸೂದೆಯಲ್ಲಿ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಕೃಷ್ಣ ಬೈರೇಗೌಡ, ‘ಇವತ್ತಿಗೂ ಸಣ್ಣ ಪುಟ್ಟ ಬಾಡಿಗೆದಾರರಿಗೆ ಶೋಷಣೆ ಆಗುತ್ತಿದೆ ಎಂಬುದು ನಿಜ. ಅಂತಹವರನ್ನು ರಕ್ಷಿಸಲು ಕಾನೂನಿನಲ್ಲಿ ಅವಕಾಶವಿದೆ. ಆದರೆ, ನಾವು ಈ ಕಾನೂನನ್ನು ಅನುಸರಣೆ ಮಾಡುವುದನ್ನೇ ಮರೆತಿದ್ದೇವೆ. ನಾವೆಲ್ಲರೂ ಒಟ್ಟಾಗಿ ಜನರಲ್ಲಿ ಅರಿವು ಮೂಡಿಸಬೇಕು’ ಎಂದು ಅವರು ಹೇಳಿದರು.
.ವಿಧಾನಸಭೆ: ರಸ್ತೆ ಸುರಕ್ಷತಾ ಮಸೂದೆ ಸೇರಿ ನಾಲ್ಕು ತಿದ್ದುಪಡಿ ಮಸೂದೆ ಮಂಡನೆ.ಅಧಿವೇಶನ | ವಿಧಾನ ಪರಿಷತ್, ವಿಧಾನಸಭೆ ಪ್ರಶ್ನೋತ್ತರಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.