ಬೆಂಗಳೂರು: ಕರ್ನಾಟಕ ಸರ್ಕಾರ ಹೆಚ್ಚಿಸಿರುವ ಶೇ 56 ಮೀಸಲಾತಿಯ ರಕ್ಷಣೆಗಾಗಿ, ಸಂವಿಧಾನದ 9ನೇ ಪರಿಚ್ಛೇದಕ್ಕೆ ತಿದ್ದುಪಡಿ ತರಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆ ಒತ್ತಾಯಿಸಿದೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ವೇದಿಕೆಯ ಮುಖಂಡ, ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ‘ಪರಿಶಿಷ್ಟರು, ಹಿಂದುಳಿದ ವರ್ಗಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹಂಚಿಕೆಯಾಗಬೇಕು ಎಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣವನ್ನು ಈ ಸಮುದಾಯಗಳ ಜನಸಂಖ್ಯೆಗೆ ಅನುಗುಣವಾಗಿ ಕ್ರಮವಾಗಿ ಶೇಕಡ 15ರಿಂದ ಶೇ 17ಕ್ಕೆ ಮತ್ತು ಶೇ 3ರಿಂದ ಶೇ 7ಕ್ಕೆ ಹೆಚ್ಚಳ ಮಾಡಲಾಗಿತ್ತು. ವಿಧಾನಸಭೆ, ವಿಧಾನ ಪರಿಷತ್ನಲ್ಲೂ ಸರ್ವಾನುಮತದಿಂದ ಅಂಗೀಕಾರವಾಗಿತ್ತು. ಕೆಲವರು ಕೋರ್ಟ್ ಮೊರೆಹೋಗಿದ್ದರ ಪರಿಣಾಮವಾಗಿ ಮೀಸಲಾತಿ ಹೆಚ್ಚಳದ ಸೌಲಭ್ಯ ಪರಿಶಿಷ್ಟರಿಗೆ ಸಿಕ್ಕಿಲ್ಲ. ಮೀಸಲಾತಿ ಹೆಚ್ಚಳಕ್ಕೆ ಸಿಂಧುತ್ವ ನೀಡಲು ಸಂವಿಧಾನದ ಪರಿಚ್ಛೇದ 9ಕ್ಕೆ ತಿದ್ದುಪಡಿ ತಂದಿದ್ದರೆ ಸಮಸ್ಯೆಯೇ ಇರುತ್ತಿರಲಿಲ್ಲ. ಕೇಂದ್ರ ಸರ್ಕಾರದ ಅಸಹಕಾರದಿಂದ ಹೆಚ್ಚಳದ ಲಾಭ ಪರಿಶಿಷ್ಟರಿಗೆ ಸಿಗಲಿಲ್ಲ’ ಎಂದರು.

ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ನೇತೃತ್ವದ ಆಯೋಗ, ನ್ಯಾಯಮೂರ್ತಿ ಸುಭಾಷ್ ಅಡಿ ನೇತೃತ್ವದ ಸಮಿತಿಯ ಸಲ್ಲಿಸಿದ್ದ ವರದಿ ಪ್ರಕಾರ ಹಿಂದಿನ ಬಿಜೆಪಿ ಸರ್ಕಾರ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿತ್ತು. ರಾಜ್ಯದ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದು ಒತ್ತಾಯಿಸಿದರು.

ತಮಿಳುನಾಡು ಸರ್ಕಾರ 1994ರಲ್ಲಿ ಮೀಸಲಾತಿ ಪ್ರಮಾಣವನ್ನು ಶೇ 50ಕ್ಕಿಂತಲೂ ಹೆಚ್ಚಿಸಿದೆ. ಸಂವಿಧಾನದ ಪರಿಚ್ಛೇದ 9ರ ವ್ಯಾಪ್ತಿಗೆ ಆ ವಿಷಯವನ್ನು ಸೇರಿಸಿರುವುದರಿಂದ ಮೀಸಲಾತಿಗೆ ರಕ್ಷಣೆ ದೊರೆತಿದೆ. ಆದರೆ, ಬಿಜೆಪಿ ನೇತೃತ್ವದ ಸರ್ಕಾರ ಮೀಸಲಾತಿ ಹೆಚ್ಚಳ ಮಾಡಿದರೂ ಅವರದೇ ಕೇಂದ್ರ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ. ಕೇಂದ್ರದ ಮೇಲೆ ಒತ್ತಡ ಹಾಕುವಂತೆ, ಕೋರ್ಟ್ ತಡೆಯಾಜ್ಞೆಯನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದರು.

ಆರ್ಎಸ್ಎಸ್ ಮೌನ ಏಕೆ: ಉಗ್ರಪ್ಪ

‘ಆರ್ಎಸ್ಎಸ್ ಸರ ಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರು ನಾವೆಲ್ಲರು ಹಿಂದೂ ಎನ್ನುತ್ತಾರೆ. ಮೀಸಲಾತಿ ಹೆಚ್ಚಳದ ವಿಚಾರದಲ್ಲಿ ಏಕೆ ಮೌನವಾಗಿದ್ದಾರೆ’ ಎಂದು ಉಗ್ರಪ್ಪ ಪ್ರಶ್ನಿಸಿದರು.

ಹಿಂದಿನ ಬಿಜೆಪಿ ಸರ್ಕಾರ ಹೆಚ್ಚಿಸಿದ್ದ ಮೀಸಲಾತಿ ಪ್ರಮಾಣಕ್ಕೆ ಸಂವಿಧಾನದ ರಕ್ಷಣೆ ಸಿಗುವಂತೆ ಮಾಡಲು ಸಂವಿಧಾನದ 9ನೇ ಪರಿಚ್ಛೇದಕ್ಕೆ ತಿದ್ದುಪಡಿ ತರಲು ಹೊಸಬಾಳೆ ಗಮನ ಹರಿಸಬೇಕು. ರಾಜ್ಯ ಸರ್ಕಾರವು ಸರ್ವಪಕ್ಷ ನಿಯೋಗದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮೀಸಲಾತಿ ಹೆಚ್ಚಳಕ್ಕೆ ಒಪ್ಪಿಗೆ ಪಡೆಯಬೇಕು. ಆರ್ಎಸ್ಎಸ್ನಂತಹ ಸಂಘಟನೆಗಳು ಬೆಂಬಲ ನೀಡಬೇಕು ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-4-1359000372

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.