ಬೆಂಗಳೂರು: ಒಂದನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳ ಕನಿಷ್ಠ ವಯಸ್ಸು 2026 ಜೂನ್ 1ಕ್ಕೆ 6 ವರ್ಷ ಪೂರ್ಣಗೊಂಡಿರಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಖಚಿತಪಡಿಸಿದೆ.

2026–27ನೇ ಸಾಲಿನಲ್ಲಿ ಪ್ರವೇಶ ಪಡೆಯುವ ಮಕ್ಕಳಿಗೆ ಈ ನಿಯಮ ಅನ್ವಯವಾಗಲಿದ್ದು, ವಯೋಮಿತಿಯಲ್ಲಿ ಸಡಿಲಗೊಳಿಸದಿರಲು ಇಲಾಖೆ ನಿರ್ಧರಿಸಿದೆ.

ಒಂದನೇ ತರಗತಿ ಪ್ರವೇಶ ಪಡೆಯುವ ಮಗುವಿಗೆ 6 ವರ್ಷ ಪೂರ್ಣಗೊಂಡಿರಬೇಕು ಎಂಬ ನಿಯಮ ಕಡ್ಡಾಯಗೊಳಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2022ರಲ್ಲೇ ಆದೇಶ ಹೊರಡಿಸಿತ್ತು. ಆದೇಶದಲ್ಲಿ ಯಾವ ವರ್ಷದಿಂದ ಸ್ಪಷ್ಟತೆ ಇರಲಿಲ್ಲ. ಹಾಗಾಗಿ, ಮತ್ತೊಂದು ಆದೇಶ ಹೊರಡಿಸಿ, ಈ ನಿಯಮ 2025–26ನೇ ಸಾಲಿನಿಂದ ಅನ್ವಯವಾಗುವುದು ಎಂದು ಸ್ಪಷ್ಟಪಡಿಸಿತ್ತು. ಪೋಷಕರ ಒತ್ತಾಯಕ್ಕೆ ಮಣಿದು ಕಳೆದ ವರ್ಷಕ್ಕಷ್ಟೇ ಸೀಮಿತಗೊಳಿಸಿ, ಕನಿಷ್ಠ ವಯೋಮಿತಿಯನ್ನು 5 ವರ್ಷ 5 ತಿಂಗಳಿಗೆ ನಿಗದಿ ಮಾಡಲಾಗಿತ್ತು.

2026–27ನೇ ಶೈಕ್ಷಣಿಕ ಸಾಲಿನಿಂದ ಎಲ್ಕೆಜಿ ಪ್ರವೇಶಕ್ಕೆ ಕನಿಷ್ಠ ವಯೋಮಿತಿ 4 ವರ್ಷ, ಯುಕೆಜಿ ಪ್ರವೇಶಕ್ಕೆ 5 ವರ್ಷ ಹಾಗೂ ಒಂದನೇ ತರಗತಿಗೆ 6 ವರ್ಷ ವಯೋಮಿತಿ ಕಡ್ಡಾಯಗೊಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.