ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ಫೆ.28ರಿಂದ ಆರಂಭವಾಗಲಿದ್ದು, 1,217 ಕೇಂದ್ರಗಳಲ್ಲಿ 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಈ ಕುರಿತು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ‘ಪ್ರತಿ ಪರೀಕ್ಷಾ ಕೇಂದ್ರವೂ ಸಿಸಿಟಿವಿ ಕ್ಯಾಮೆರಾ ಒಳಗೊಂಡಿದೆ. ವಿವಿಧ ಹಂತದ ಅಧಿಕಾರಿಗಳು ವೆಬ್ಕಾಸ್ಟಿಂಗ್ ಮೂಲಕ ಪರೀಕ್ಷಾ ಚಟುವಟಿಕೆಗಳ ಮೇಲೆ ನಿರಂತರ ನಿಗಾವಹಿಸಲಿದ್ದಾರೆ. ಪರೀಕ್ಷಾ ಕೇಂದ್ರದ ಹೊರಗೂ ಕಟ್ಟುನಿಟ್ಟಿನ ಕಣ್ಗಾವಲಿಗೆ ವ್ಯವಸ್ಥೆ ಮಾಡಲಾಗುತ್ತಿದೆ’ ಎಂದರು.

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ನಡೆದರೆ ಅಂತಹ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆಪತ್ರಿಕೆ ಹರಿಬಿಡುವುದು, ಆರ್ಥಿಕ ಲಾಭಕ್ಕಾಗಿ ವಹಿವಾಟು ನಡೆಸುವ ವ್ಯಕ್ತಿಗಳ ಖಾತೆಗಳನ್ನು ನಿರ್ಬಂಧಿಸಲಾಗುವುದು. ಕಾನೂನು ಕ್ರಮ ಜರುಗಿಸಲಾಗುವುದು. ಹಿಂದೆ ಇಂತಹ ಕೃತ್ಯ ಎಸಗಿದ ಅಪರಾಧಿಗಳ ವಿರುದ್ಧ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ನಿಷೇಧಿತ ಪ್ರದೇಶವಾಗಿರುತ್ತದೆ. ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಅಗತ್ಯ ಮುಂಜಾಗ್ರತಾ ಕ್ರಮ, ಬಂದೋಬಸ್ತ್ ಕೈಗೊಳ್ಳುವ ಹೊಣೆ ನೀಡಲಾಗಿದೆ ಎಂದರು.

ಪರೀಕ್ಷಾ ಕೇಂದ್ರದ ಒಳಗೆ ಮೊಬೈಲ್ ಫೋನ್, ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ನಿಷೇಧಿಸಲಾಗಿದೆ. ಹಿಂದಿನ ವರ್ಷದಂತೆ ಈ ಬಾರಿಯೂ ವಸ್ತ್ರಸಂಹಿತೆ ಇರುತ್ತದೆ ಎಂದು ಮಾಹಿತಿ ನೀಡಿದರು.

ವಿಜ್ಞಾನಕ್ಕೇ ಅಧಿಕ ವಿದ್ಯಾರ್ಥಿಗಳು

ಈ ಬಾರಿ ನಡೆಯುವ ದ್ವಿತೀಯ ಪಿಯು ಪರೀಕ್ಷೆಯಲ್ಲಿ ವಿಜ್ಞಾನ ವಿಷಯದ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಸಂಖ್ಯೆಯೇ ಅಧಿಕ. 5174 ಕಾಲೇಜುಗಳ ನೋಂದಾಯಿತ 7.10 ಲಕ್ಷ ವಿದ್ಯಾರ್ಥಿಗಳಲ್ಲಿ 2.92 ಲಕ್ಷ ವಿಜ್ಞಾನ ವಿಭಾಗಕ್ಕೆ ಸೇರಿದವರು. ವಾಣಿಜ್ಯ ವಿಷಯದ ಪರೀಕ್ಷೆಗೆ 2.11 ಲಕ್ಷ ಹಾಗೂ ಕಲಾ ವಿಷಯಗಳಿಗೆ 1.42 ಲಕ್ಷ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. ಕಲಾ ವಿಭಾಗಕ್ಕೆ ಪ್ರವೇಶ ಪಡೆಯುವವರ ಸಂಖ್ಯೆ ಕಡಿಮೆಯಾಗುತ್ತಿದ್ದು ಸರ್ಕಾರಿ ಕಾಲೇಜುಗಳಲ್ಲಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಲ್ಲಿ ಹೆಚ್ಚುವರಿ ತರಗತಿಗಳನ್ನು ಆರಂಭಿಸಲು ಸೂಚಿಸಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು. ಪರೀಕ್ಷೆ ಬರೆಯುತ್ತಿರುವವರಲ್ಲಿ 6.46 ಲಕ್ಷ ಹೊಸ ವಿದ್ಯಾರ್ಥಿಗಳು 50540 ಪುನರಾವರ್ತಿತರು ಹಾಗೂ 13022 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಪರೀಕ್ಷೆ–1ಕ್ಕೆ ಹಾಜರಿ

ಕಡ್ಡಾಯ ಪ್ರತಿ ವರ್ಷದಂತೆ ಈ ಬಾರಿಯೂ ಮೂರು ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಮೂರು ಪರೀಕ್ಷೆಗಳಿಂದ ಯಾವ ವಿಷಯಗಳಲ್ಲಿ ಹೆಚ್ಚು ಅಂಕ ಪಡೆಯುತ್ತಾರೋ ಅದೇ ಅಂಕಗಳನ್ನು ಅಂತಿಮ ಅಂಕಪಟ್ಟಿಯಲ್ಲಿ ನಮೂದಿಸಲಾಗುತ್ತದೆ. ಪ್ರತಿ ವಿದ್ಯಾರ್ಥಿಯೂ ಪರೀಕ್ಷೆ–1ಗೆ ಹಾಜರಾಗುವುದು ಕಡ್ಡಾಯ. ಮೊದಲ ಪರೀಕ್ಷೆಗೆ ಹಾಜರಾಗದವರಿಗೆ ಎರಡನೇ ಮತ್ತು ಮೂರನೇ ಪರೀಕ್ಷೆಗೆ ಅವಕಾಶ ಇಲ್ಲ ಎಂದು ಮಧು ಬಂಗಾರಪ್ಪ ಹೇಳಿದರು.

ಮಾರ್ಚ್ 18ರಿಂದ ಎಸ್ಎಸ್ಎಲ್ಸಿ ಪರೀಕ್ಷೆ

ಮಾರ್ಚ್ 18ರಿಂದ ಆರಂಭವಾಗಲಿದ್ದು ಈ ಬಾರಿ ದಾಖಲೆಯ 9.02 ಲಕ್ಷ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. ಕಳೆದ ಬಾರಿ 8.96 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. 15941 ಶಾಲೆಗಳ ವಿದ್ಯಾರ್ಥಿಗಳಲ್ಲಿ 8.12 ಲಕ್ಷ ಹೊಸಬರು 62845 ಪುನರಾವರ್ತಿತರು ಹಾಗೂ 27189 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ. 2871 ಪರೀಕ್ಷಾ ಕೇಂದ್ರಗಳಲ್ಲಿ ಏ.2ರವರೆಗೂ ಪರೀಕ್ಷೆ ನಡೆಯಲಿದೆ.

ವಿದ್ಯಾರ್ಥಿಗಳಿಗೆ ಸಹಾಯವಾಣಿ

ವಿದ್ಯಾರ್ಥಿಗಳಿಗೆ ಪರೀಕ್ಷಾ ಒತ್ತಡ ಎದುರಿಸಲು ಸಹಾಯವಾಗುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸಹಾಯವಾಣಿ ಆರಂಭಿಸಿದೆ. ವಿದ್ಯಾರ್ಥಿಗಳು 080-23310075/76 ಸಂಖ್ಯೆಗೆ ಸಂಪರ್ಕಿಸಬಹುದು. ಉಚಿತ ಬಸ್ ಸೌಲಭ್ಯ: ಪರೀಕ್ಷಾ ದಿನಗಳಲ್ಲಿ ವಿದ್ಯಾರ್ಥಿಗಳು ಕೆಎಸ್ಆರ್ಟಿಸಿ ಬಿಎಂಟಿಸಿ ಸೇರಿದಂತೆ ಸಾರಿಗೆ ನಿಗಮಗಳ ಬಸ್ಗಳಲ್ಲಿ ಪ್ರವೇಶ ಪತ್ರ ತೋರಿಸಿ ಉಚಿತ ಪ್ರಯಾಣ ಮಾಡಬಹುದು. ‘ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಖಾಸಗಿ ಬಸ್ಗಳ ಮಾಲೀಕರು ಸಹಕರಿಸಬೇಕು ಎಂದು ಮನವಿ ಮಾಡಲಾಗುವುದು. ದೂರದ ಪ್ರದೇಶಗಳಿಂದ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ಅಗತ್ಯ ಪ್ರಯಾಣ ವ್ಯವಸ್ಥೆ ಕಲ್ಪಿಸಲು ಆಯಾ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಮಧು ಬಂಗಾರಪ್ಪ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.