ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಕ್ತಿ ಯೋಜನೆ: ‌ಎರಡನೇ ದಿನ ಉಚಿತವಾಗಿ ಪ್ರಯಾಣಿಸಿದ 41.34 ಲಕ್ಷ ಮಹಿಳೆಯರು

Published 13 ಜೂನ್ 2023, 11:12 IST
Last Updated 13 ಜೂನ್ 2023, 11:12 IST
ಅಕ್ಷರ ಗಾತ್ರ

ಬೆಂಗಳೂರು: ಕಾಂಗ್ರೆಸ್‌ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ‘ಗ್ಯಾರಂಟಿ’ಗಳಲ್ಲಿ ಒಂದಾದ, ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆ ಒದಗಿಸುವ ‘ಶಕ್ತಿ’ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಚಾಲನೆ ನೀಡಿದ್ದಾರೆ.

ಶಕ್ತಿ ಯೋಜನೆ ಜಾರಿಯಾಗಿ ಇಂದಿಗೆ ಎರಡು ದಿನ ಕಳೆದಿದೆ. ಮೊದಲ ದಿನ ಭಾನುವಾರ ಮಧ್ಯಾಹ್ನ 1 ಗಂಟೆಯಿಂದ ಸೋಮವಾರ ಮಧ್ಯಾಹ್ನ 12 ಗಂಟೆವರೆಗೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಒಟ್ಟು 5,71,023 ಮಂದಿ ಮಹಿಳೆಯರು ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಪ್ರಯಾಣದ ವೆಚ್ಚ ₹1.40 ಕೋಟಿ ರಷ್ಟಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಎರಡನೇ ದಿನ ಸೋಮವಾರ ಮಧ್ಯಾಹ್ನ 12 ಗಂಟೆಯಿಂದ ಮಂಗಳವಾರ ಮಧ್ಯಾಹ್ನ 12 ಗಂಟೆವರೆಗೆ ಒಟ್ಟು 41,34,726 ಮಂದಿ ಮಹಿಳೆಯರು ಮಹಿಳೆಯರು ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಪ್ರಯಾಣದ ವೆಚ್ಚ ₹8.83 ಕೋಟಿ ಆಗಿದೆ ಎಂದು ಅಂದಾಜಿಸಲಾಗಿದೆ.

ಮಹಿಳೆಯರ ಉಚಿತ ಪ್ರಯಾಣದ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT