ಬೆಂಗಳೂರು: ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಸುವುದನ್ನು ನಿಷೇಧಿಸಲು ತಜ್ಞರ ಸಮಿತಿ ರಚಿಸಿ ಮಾರ್ಗಸೂಚಿಗಳನ್ನು ರೂಪಿಸಲಾಗುವುದು. ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.

ವಿಧಾನ ಪರಿಷತ್ನಲ್ಲಿ ಬಿಜೆಪಿಯ ಪ್ರತಾಪ್ ಸಿಂಹ ನಾಯಕ್ ಪ್ರಶ್ನೆಗೆ ಅವರು ಸೋಮವಾರ ಉತ್ತರಿಸಿದರು. ನಿಷೇಧ ಜಾರಿ ಮಾಡುವ ಕುರಿತು ಪೋಷಕರೊಂದಿಗೂ ಚರ್ಚೆ ನಡೆಸಲಾಗುವುದು. ಮಕ್ಕಳ ಭವಿಷ್ಯ ಹಾಳಾಗಬಾರದು ಎಂಬ ಕಾಳಜಿಯಿಂದ ನಿಷೇಧಕ್ಕೆ ಮುಂದಾಗಿದ್ದು, ಈಗಾಗಲೇ ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ ಎಂದರು.

ಮೊಬೈಲ್ ಬಳಕೆಯು ಮಕ್ಕಳ ಮೇಲೆ ಅಡ್ಡಪರಿಣಾಮ ಬೀರುತ್ತಿದೆ. ಇದನ್ನು ತಡೆಯುವ ಉದ್ದೇಶದಿಂದ ಜಾಲತಾಣಗಳ ಬಳಕೆ ಮೇಲೆ ನಿಷೇಧ ಹೇರುವ ಅವಶ್ಯ ಇದೆ. ಶಾಲಾ–ಕಾಲೇಜುಗಳಿಗೆ ಮೊಬೈಲ್ ತೆಗೆದುಕೊಂಡು ಹೋಗಬಾರದು ಎಂದು ಹೇಳಿದರೂ ಪಾಲನೆಯಾಗುತ್ತಿಲ್ಲ. ಈ ಬಗ್ಗೆ ಅರಿವು ಮೂಡಿಸಲು ‘ಮೊಬೈಲ್ ಬಿಡಿ–ಪುಸ್ತಕ ಹಿಡಿ’ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಮಕ್ಕಳಿಗೆ ನೈತಿಕ ಶಿಕ್ಷಣ ನೀಡುವುದನ್ನು 2026–27ನೇ ಸಾಲಿನಿಂದ ಜಾರಿಗೊಳಿಸಲಾಗುವುದು. ಇದಕ್ಕೆ ಸಂಬಂಧಿಸಿದ ಪುಸ್ತಕವನ್ನೂ ನೀಡಲಾಗುವುದು. ವಾರಕ್ಕೆ ಎಷ್ಟು ಗಂಟೆ ನೈತಿಕ ಶಿಕ್ಷಣ ಬೋಧನೆಗೆ ಅವಕಾಶ ನೀಡಬೇಕು ಎಂಬುದನ್ನು ಜೂನ್ನಲ್ಲಿ ಶಾಲೆಗಳು ಆರಂಭವಾಗುವುದಕ್ಕೂ ಮೊದಲೇ ತಿಳಿಸಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.