ಬೆಂಗಳೂರು: ‘ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಹಂಚಿಕೆ ಮಾಡಿದ ನಂತರವೇ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು’ ಎಂದು ದಲಿತ ಎಡಗೈ ಸಮುದಾಯದ ನಾಯಕರು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಂಗಳವಾರ ಭೇಟಿ ಮಾಡಿದ ಸಚಿವರಾದ ಕೆ.ಎಚ್. ಮುನಿಯಪ್ಪ ಮತ್ತು ಆರ್.ಬಿ. ತಿಮ್ಮಾಪುರ ನೇತೃತ್ವದ ಎಡಗೈ ಸಮುದಾಯದ ನಾಯಕರು ಈ ಕುರಿತು ಮನವಿ ಸಲ್ಲಿಸಿದ್ದಾರೆ.

ಒಳ ಮೀಸಲಾತಿ ಕುರಿತು ಚರ್ಚಿಸಲು ಇದೇ 27ರಂದು ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ.

ಮುಖ್ಯಮಂತ್ರಿಯನ್ನು ಭೇಟಿಯಾದ ಬಳಿಕ ಮಾತನಾಡಿದ ಮುನಿಯಪ್ಪ, ‘ನಮ್ಮ ಮನವಿಗೆ ಮುಖ್ಯಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಪರಿಶಿಷ್ಟ ಜಾತಿಯ ಎಲ್ಲ 101 ಜಾತಿಗಳಿಗೂ ಸಮಾನ ನ್ಯಾಯ ಒದಗಿಸಲು ಸರ್ಕಾರ ಬದ್ಧವಾಗಿದೆ. ಹೀಗಾಗಿ, ಈ ವಿಚಾರವಾಗಿ ಅನಗತ್ಯ ಹೇಳಿಕೆಗಳನ್ನು ಯಾರೂ ನೀಡಬಾರದು, ಸಂಘಟನೆಗಳು ಹೋರಾಟಗಳನ್ನೂ ಹಮ್ಮಿಕೊಳ್ಳಬಾರದು’ ಎಂದು ಮನವಿ ಮಾಡಿದರು.

‘ಒಳಮೀಸಲಾತಿ ಕುರಿತು ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ’ ಎಂದರು.

‘ಒಳಮೀಸಲಾತಿ ಗೊಂದಲವನ್ನು ಬಗೆಹರಿಸಿಕೊಳ್ಳುವವರೆಗೂ 56,432 ಹುದ್ದೆಗಳ ನೇಮಕ ಪ್ರಕ್ರಿಯೆ ಆರಂಭಿಸಬಾರದು. ವಿಶೇಷ ಸಂಪುಟ ಸಭೆಯಲ್ಲಿ ಆಂಧ್ರ ಪ್ರದೇಶ, ತೆಲಂಗಾಣ ಮಾದರಿಯಲ್ಲೇ ಒಳಮೀಸಲಾತಿ ಸಮರ್ಪಕ ಅನುಷ್ಠಾನದ ನಿರ್ಧಾರ ಕೈಗೊಂಡು ಸಮುದಾಯದಲ್ಲಿನ ಆತಂಕ ದೂರ ಮಾಡಬೇಕು’ ಎಂದು ಮಾಜಿ ಸಚಿವ ಎಚ್. ಆಂಜನೇಯ ಆಗ್ರಹಿಸಿದರು.

‘ಸದ್ಯ ಜಾರಿಗೊಳಿಸಿರುವ ಒಳಮೀಸಲಾತಿ ಅನುಷ್ಠಾನಗೊಳಿಸಲು ಅಡ್ಡಿಪಡಿಸುವ ಪ್ರಯತ್ನಗಳು ನಡೆಯುತ್ತಿವೆ. ವಿಶ್ವವಿದ್ಯಾಲಯಗಳಲ್ಲಿ ವಿಷಯವಾರು ನೇಮಕಾತಿಯನ್ನು ಕೈಬಿಟ್ಟು ವಿಶ್ವವಿದ್ಯಾಲಯವನ್ನೇ ಒಂದು ಘಟಕವಾಗಿ ಪರಿಗಣಿಸುವ ಹುನ್ನಾರ ನಡೆಯುತ್ತಿದೆ. ಹೈಕೋರ್ಟ್ ತಡೆಯಾಜ್ಞೆ ತೆರವುಗೊಳಿಸಿ ಪರಿಶಿಷ್ಟ ಜಾತಿಗಳಿಗೆ ಶೇ 17 ಮತ್ತು ಪರಿಶಿಷ್ಟ ಪಂಗಡಗಳಿಗೆ ಶೇ 7ರಷ್ಟು ಮೀಸಲಾತಿಯನ್ನು ಅನುಷ್ಠಾನಗೊಳಿಸಬೇಕು’ ಎಂದು ಅವರು ಆಗ್ರಹಿಸಿದರು.

ಮಾಜಿ ಸಂಸದ ಬಿ.ಎನ್. ಚಂದ್ರಪ್ಪ, ಶಾಸಕರಾದ ಶ್ರೀನಿವಾಸ್, ಕೆ.ಎಸ್. ಬಸವಂತಪ್ಪ, ಪರಿಷತ್ ಸದಸ್ಯರಾದ ಸುಧಾಮ್ ದಾಸ್, ತಿಮ್ಮಯ್ಯ, ವಸಂತ ಕುಮಾರ್ ನಿಯೋಗದಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.