ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆ–3ರ ಫಲಿತಾಂಶವನ್ನು ಪ್ರಕಟಿಸಿದೆ.
ರಾಜ್ಯದ 410 ಕೇಂದ್ರಗಳಲ್ಲಿ ಆಗಸ್ಟ್ 2ರಿಂದ 9ರವರೆಗೆ ಪರೀಕ್ಷೆ ನಡೆದಿತ್ತು.
67,729 ಬಾಲಕರು, 30,23 ಬಾಲಕಿಯರು ಸೇರಿದಂತೆ 97,952 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ 25,347 ಮಂದಿ ಉತ್ತೀರ್ಣರಾಗಿದ್ದಾರೆ.
ಮಂಡಳಿಯ ಜಾಲತಾಣ https://karresults.nic.in ನಲ್ಲಿ ಫಲಿತಾಂಶ ವೀಕ್ಷಿಸಬಹುದು.