ಗುರುವಾರ, 21 ಮೇ 2026
×
ADVERTISEMENT

SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನೋಡುವುದು ಹೇಗೆ?

Published : 22 ಏಪ್ರಿಲ್ 2026, 16:02 IST
Last Updated : 23 ಏಪ್ರಿಲ್ 2026, 0:08 IST
ADVERTISEMENT
ಫಾಲೋ ಮಾಡಿ
Comments
ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ - 1ರ ಫಲಿತಾಂಶವನ್ನು ಇಂದು (ಏ. 23) ಮಧ್ಯಾಹ್ನ 12ಕ್ಕೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ಸಂಕ್ಷಿಪ್ತ ಮಾಹಿತಿ – ಪೂರ್ಣ ವಿವರಣೆಗೆ ಕ್ಲಿಕ್ ಮಾಡಿ
ಪ್ರಮುಖ ಮುಖ್ಯಾಂಶಗಳ ಸಂಕ್ಷಿಪ್ತ ಸಾರಾಂಶ

SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ- 1ರ ಫಲಿತಾಂಶ ನೋಡುವುದು ಹೇಗೆ?

ಒಂದು ಸಾಲಿನಲ್ಲಿ
ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಏಪ್ರಿಲ್ 23ರ ಮಧ್ಯಾಹ್ನ 12 ಗಂಟೆಗೆ ಅಧಿಕೃತ ವೆಬ್‌ಸೈಟ್ ಮತ್ತು ಆ್ಯಪ್ ಮೂಲಕ ವೀಕ್ಷಿಸಬಹುದು.
1
ಫಲಿತಾಂಶ ಪ್ರಕಟಣೆಯ ಸಮಯ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಏಪ್ರಿಲ್ 23ರ ಮಧ್ಯಾಹ್ನ 12 ಗಂಟೆಗೆ ಬಿಡುಗಡೆ ಮಾಡಲಿದೆ.
2
ಫಲಿತಾಂಶ ವೀಕ್ಷಿಸುವ ವೇದಿಕೆಗಳು
ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ karresults.nic.in ಅಥವಾ 'KarnatakaOne' ಮೊಬೈಲ್ ಆ್ಯಪ್ ಮೂಲಕ ತಮ್ಮ ಫಲಿತಾಂಶವನ್ನು ಪಡೆಯಬಹುದು.
3
ಡಿಜಿಲಾಕರ್ ಸೌಲಭ್ಯ
ಈ ವರ್ಷದಿಂದ ಪ್ರಥಮ ಬಾರಿಗೆ ವಿದ್ಯಾರ್ಥಿಗಳು ಡಿಜಿಲಾಕರ್ (DigiLocker) ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ಅಂಕಪಟ್ಟಿಗಳನ್ನು ಡೌನ್‌ಲೋಡ್ ಮಾಡಿಕೊಳ್ಳುವ ಸೌಲಭ್ಯ ಕಲ್ಪಿಸಲಾಗಿದೆ.
4
ಸಂದೇಶಗಳ ಮೂಲಕ ಮಾಹಿತಿ
ಮಂಡಳಿಯು ವಿದ್ಯಾರ್ಥಿಗಳು ನೊಂದಾಯಿಸಿದ ಮೊಬೈಲ್ ಸಂಖ್ಯೆಗಳಿಗೆ ವಾಟ್ಸಾಪ್ ಅಥವಾ ಎಸ್‌ಎಂಎಸ್ (SMS) ಮೂಲಕ ಫಲಿತಾಂಶದ ಮಾಹಿತಿಯನ್ನು ರವಾನಿಸಲಿದೆ.
5
ಶಾಲಾ ಹಂತದಲ್ಲಿ ಫಲಿತಾಂಶ
ಫಲಿತಾಂಶ ಪ್ರಕಟವಾದ ಮಧ್ಯಾಹ್ನ 12 ಗಂಟೆಯ ನಂತರ ಸಂಬಂಧಿತ ಶಾಲೆಗಳಿಗೆ ಫಲಿತಾಂಶದ ಪಟ್ಟಿಯನ್ನು ಕಳುಹಿಸಿಕೊಡಲಾಗುತ್ತದೆ.
ಏಪ್ರಿಲ್ 23
ಫಲಿತಾಂಶ ಪ್ರಕಟಣೆಯ ದಿನಾಂಕ
ಮಧ್ಯಾಹ್ನ 12.00
ಫಲಿತಾಂಶ ಪ್ರಕಟಣೆಯ ಸಮಯ
ಎಐ ಬಳಸಿ ಸಂಸ್ಕರಿಸಲಾಗಿದೆ. ಪಿವಿ ಡಿಜಿಟಲ್ ತಂಡ ಪರಿಶೀಲಿಸಿದೆ
ಪ್ರ

ಫಲಿತಾಂಶ ಪ್ರಕಟವಾಗುವ ಸಮಯ?

‌‌‌ಏಪ್ರಿಲ್‌ 23 ರಂದು ಮಧ್ಯಾಹ್ನ 12.00 ಗಂಟೆಗೆ 2026ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ - 1ರ ಫಲಿತಾಂಶ ಪ್ರಕಟಗೊಳ್ಳಲಿದೆ.

ಪ್ರ

ಫಲಿತಾಂಶ ನೋಡುವುದು ಹೇಗೆ?

ಫಲಿತಾಂಶವನ್ನು ಮಂಡಲಿಯ ಅಧಿಕೃತ ಪೋರ್ಟಲ್ https://karresults.nic.in ಮತ್ತು ಮೊಬೈಲ್ ಆ್ಯಪ್ 'KarnatakaOne' ಮೂಲಕ ಪಡೆಯಬಹುದಾಗಿದೆ. ಅಲ್ಲದೇ, ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಾಪ್/ಎಸ್‌ಎಂಎಸ್ ಮೂಲಕವೂ ಫಲಿತಾಂಶದ ಮಾಹಿತಿಯನ್ನು ರವಾನಿಸಲಾಗುವುದು ಎಂದೂ ಮಂಡಲಿ ತಿಳಿಸಿದೆ.

ಪ್ರ

ಡಿಜಿಲಾಕರ್‌ನಿಂದ ಅಂಕಪಟ್ಟಿ ಡೌನ್‌ಲೋಡ್

ಈ ವರ್ಷ ಪ್ರಥಮ ಬಾರಿಗೆ ವಿಶೇಷವಾಗಿ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು (Marks Card) ಡಿಜಿಲಾಕರ್ (DigiLocker) ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು.‌‌ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಲು ವೆಬ್‌ಸೈಟ್: https://www.digilocker.gov.in ಗೆ ಭೇಟಿ ನೀಡಿ.

ಪ್ರ

ಅಂಕಪಟ್ಟಿ ಡೌನ್‌ಲೋಡ್ ಮಾಡುವುದು ಹೇಗೆ?

ಡಿಜಿಲಾಕರ್‌ನಿಂದ ಅಂಕಪಟ್ಟಿ ಡೌನ್‌ಲೋಡ್ ಮಾಡುವ ವಿಧಾನವನ್ನು ತಿಳಿಯಲು ಮಂಡಳಿ ವಿಡಿಯೊ ಲಿಂಕ್‌ https://tinyurl.com/mw84wmh9 ಬಿಡುಗಡೆ ಮಾಡಿದೆ.

ಪ್ರ

ಶಾಲೆಗಳಲ್ಲಿ ಯಾವಾಗ ಲಭ್ಯ?

ಫಲಿತಾಂಶ ಪಟ್ಟಿಯನ್ನು ಸಂಬಂಧಿತ ಶಾಲೆಗಳಿಗೆ ಮಧ್ಯಾಹ್ನ 12.00ನಂತರ ರವಾನಿಸಲಾಗುವುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT