ಬೆಂಗಳೂರು: ‘ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ನೋಂದಾಯಿತ ಮೊಬೈಲ್ ಸಂಖ್ಯೆಗೆ ಎಸ್ಎಂಎಸ್ ಸಂದೇಶದ ಮೂಲಕ ಅಂಕಗಳ ವಿವರ ತಲುಪಲಿದೆ. ಇದಕ್ಕೆ ಪ್ರತ್ಯೇಕ ನೋಂದಣಿ ಅಗತ್ಯ ಇಲ್ಲ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

‘ಪರೀಕ್ಷೆಯ ಫಲಿತಾಂಶ ಸೋಮವಾರ (ಆಗಸ್ಟ್ 10) ಮಧ್ಯಾಹ್ನ 3 ಗಂಟೆಗೆ ಇಲಾಖೆಯ ಅಧಿಕೃತ ಜಾಲತಾಣದಲ್ಲಿ ಲಭ್ಯವಾಗಲಿದೆ’ ಎಂದೂ ಅವರು ಹೇಳಿದ್ದಾರೆ.

‘ಯಾವುದೇ ಸಂಖ್ಯೆಗೆ ವಿದ್ಯಾರ್ಥಿಗಳು ಎಸ್ಎಂಎಸ್ ಕಳುಹಿಸುವ ಅಗತ್ಯವಿಲ್ಲ. ನೆಟ್ ವರ್ಕ್ ಸಮಸ್ಯೆ ಆಗದಂತೆ ಎಲ್ಲ ವ್ಯವಸ್ಥೆ ಮಾಡಲಾಗಿದೆ’ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ಸುಮಂಗಲಾ ತಿಳಿಸಿದ್ದಾರೆ.

‘ಇಲಾಖೆಯ ಅಧಿಕೃತ ವೆಬ್ ಸೈಟ್ ಗಳಾದ kseeb.kar.nic.in ಅಥವಾ karresults.nic.in ನಲ್ಲಿಯೂ ಫಲಿತಾಂಶ ವೀಕ್ಷಿಸಬಹುದು’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.