ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಿಂದುಳಿದ ವರ್ಗಗಳ ಆಯೋಗಕ್ಕೆ ಜಿ.ಎಸ್. ಸಂಗ್ರೇಶಿ ಅಧ್ಯಕ್ಷ

Published 27 ಜೂನ್ 2024, 16:46 IST
Last Updated 27 ಜೂನ್ 2024, 16:46 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ನೂತನ ಅಧ್ಯಕ್ಷರನ್ನಾಗಿ ಗದಿಗೆಪ್ಪ ಸಣ್ಣಬಸಪ್ಪ ಸಂಗ್ರೇಶಿ (ಜಿ.ಎಸ್. ಸಂಗ್ರೇಶಿ) ಅವರನ್ನು ನೇಮಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

ಅವರು ಪ್ರಸ್ತುತ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಂಗ್ರೇಶಿ ಅವರು ಅಧ್ಯಕ್ಷರಾಗಿ ಕಾರ್ಯಭಾರ ವಹಿಸಿಕೊಂಡ ದಿನದಿಂದ ಮುಂದಿನ ಮೂರು ವರ್ಷ ಅಥವಾ ಮುಂದಿನ ಆದೇಶದವರೆಗೆ, ಅವೆರಡರಲ್ಲಿ ಯಾವುದು ಮೊದಲೊ ಅಲ್ಲಿಯವರೆಗೆ ಅಧಿಕಾರ ಅವಧಿ ಇರಲಿದೆ.

ಮೈಸೂರು ಜಿಲ್ಲಾ ಮತ್ತು ಸೆಷನ್ಸ್‌ ಪ್ರಧಾನ ನ್ಯಾಯಾಧೀಶರಾಗಿದ್ದ ಜಿ. ಎಸ್ ಸಂಗ್ರೇಶಿ ಅವರನ್ನು ನಿಯೋಜನೆಯ ಮೇಲೆ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT