ಬೆಂಗಳೂರು: ‘ಬಲಿಜ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿ ನೀಡಬೇಕು’ ಎಂದು ಆಗ್ರಹಿಸಿ ಬಲಿಜ ಸಮುದಾಯದ ಜನರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿದ್ದ ಸಮುದಾಯದ ಜನ, ಬಹಿರಂಗ ಸಭೆ ನಡೆಸಿ ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದರು. ಕರ್ನಾಟಕ ರಾಜ್ಯ ಬಲಿಜ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

‘ಬಲಿಜ ಸಮುದಾಯಕ್ಕೆ ಸೇರಿರುವ 40 ಲಕ್ಷಕ್ಕೂ ಹೆಚ್ಚು ಜನ ರಾಜ್ಯದಲ್ಲಿದ್ದಾರೆ. ಕೃಷಿ, ಕೂಲಿ, ಹೈನುಗಾರಿಕೆ, ಬಳೆ, ಹೂವು ಹಾಗೂ ದ್ರವ್ಯಗಳ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಆರ್ಥಿಕ, ಸಾಮಾಜಿಕವಾಗಿ ಸಾಕಷ್ಟು ಹಿಂದುಳಿದಿದ್ದಾರೆ. ಉದ್ಯೋಗ, ರಾಜಕೀಯ ಸೇರಿ ಎಲ್ಲ ಕ್ಷೇತ್ರಗಳಲ್ಲಿ 2ಎ ಮೀಸಲಾತಿ ನೀಡಬೇಕು’ ಎಂದು ಒತ್ತಾಯಿಸಿದರು. ‘ಬೇಡಿಕೆ ಈಡೇರಿಸದಿದ್ದರೆ ಜ.16ರಿಂದ ಅನಿರ್ದಿಷ್ಟಾ ವಧಿ ಪ್ರತಿಭಟನೆ ನಡೆಸಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.