‘ಎರಡು ಬಾಟಲಿ ಮದ್ಯ ಉಚಿತ ಕೊಡಿ’
‘ಗ್ಯಾರಂಟಿ ಯೋಜನೆಗಳ ಮಾದರಿಯಲ್ಲೇ ಪುರುಷರಿಗೆ ಉಚಿತವಾಗಿ ವಾರಕ್ಕೆ ಎರಡು ಬಾಟಲಿ ಮದ್ಯ ವಿತರಿಸುವ ಹೊಸ ಯೋಜನೆ ಜಾರಿಗೊಳಿಸಿ. ಸಹಕಾರ ಸಂಘಗಳ ಮೂಲಕ ಉಚಿತ ಮದ್ಯ ವಿತರಣೆಗೆ ವ್ಯವಸ್ಥೆ ಮಾಡಿ’ ಎಂದು ಜೆಡಿಎಸ್‌ನ ಎಂ.ಟಿ. ಕೃಷ್ಣಪ್ಪ ಸಲಹೆ ನೀಡಿದರು. ‘ದುಡಿಯುವ ಜನರು ಮದ್ಯ ಸೇವಿಸುತ್ತಾರೆ. ಅದನ್ನು ತಪ್ಪಿಸಲು ಆಗುವುದಿಲ್ಲ. ಪುರುಷರಿಗೆ ಉಚಿತವಾಗಿ ಮದ್ಯ ವಿತರಿಸುವ ಯೋಜನೆ ಜಾರಿಗೊಳಿಸಿ’ ಎಂದರು.