ಬೆಂಗಳೂರು: ಮಲ್ಲೇಶ್ವರದಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ(ಕರಾಮುವಿ) ಮಹಿಳಾ ಪ್ರಾದೇಶಿಕ ಕೇಂದ್ರದಲ್ಲಿ 2025–26ರ ಸಾಲಿನ ಜನವರಿ ಆವೃತ್ತಿಯ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ.

‘ಬಿ.ಎ., ಬಿ.ಕಾಂ., ಬಿ.ಎಸ್.ಡಬ್ಲ್ಯೂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಸ್ಸಿ.(ಜನರಲ್ ಮತ್ತು ಐ.ಟಿ.), ಬಿ.ಎಲ್.ಐ.ಎಸ್ಸಿ., ಎಂ.ಎ., ಎಂ.ಸಿ.ಜೆ., ಎಂ.ಎಸ್.ಡಬ್ಲ್ಯು, ಎಂ.ಕಾಂ., ಎಂ.ಎಲ್.ಐ.ಎಸ್ಸಿ., ಎಂ.ಸಿ.ಎ., ಎಂ.ಎಸ್ಸಿ., ಎಂ.ಬಿ.ಎ., ಪಿ.ಜಿ. ಸರ್ಟಿಫಿಕೇಟ್ ಪ್ರೋಗ್ರಾಮ್ಗಳು, ಡಿಪ್ಲೊಮಾ ಪ್ರೋಗ್ರಾಮ್ಗಳು ಮತ್ತು ಸರ್ಟಿಫಿಕೇಟ್ ಪ್ರೋಗ್ರಾಮ್ಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ’ ಎಂದು ಪ್ರಾದೇಶಿಕ ನಿರ್ದೇಶಕಿ ಶಶಿಕಲಾ ಜೆ. ತಿಳಿಸಿದ್ದಾರೆ.

ಆಸಕ್ತ ವಿದ್ಯಾರ್ಥಿಗಳು ಕರಾಮುವಿ ಅಧಿಕೃತ ಜಾಲತಾಣದಲ್ಲಿ (www.ksoumysuru.ac.in) ಅರ್ಜಿಗಳನ್ನು ಭರ್ತಿ ಮಾಡಬೇಕು. ಪ್ರವೇಶ ಶುಲ್ಕವನ್ನು ಪ್ರಾದೇಶಿಕ ಕಚೇರಿಯಲ್ಲಿ ಅಥವಾ ಆನ್ಲೈನ್ ಮೂಲಕ ಪಾವತಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬಿ.ಪಿ.ಎಲ್. ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ಡಿಫೆನ್ಸ್ ಮತ್ತು ನಿವೃತ್ತ ಸೈನಿಕರಿಗೆ, ಆಟೋ ಅಥವಾ ಕ್ಯಾಬ್ ಚಾಲಕರು ಮತ್ತು ಅವರ ಮಕ್ಕಳಿಗೆ, ಕೆಎಸ್ಆರ್ಟಿಸಿ, ಬಿಎಂಟಿಸಿ, ಎಸ್ಡಬ್ಲ್ಯೂಕೆಆರ್ಟಿಸಿ ಮತ್ತು ಕೆಕೆಆರ್ಟಿಸಿ ನೌಕರರಿಗೆ ಬೋಧನಾ ಶುಲ್ಕ ವಿನಾಯಿತಿ ಇರಲಿದೆ.

ಕೋವಿಡ್ ಸಾಂಕ್ರಾಮಿಕದಿಂದ ಮೃತರಾದವರ ಮಕ್ಕಳು, ಲಿಂಗತ್ವ ಅಲ್ಪಸಂಖ್ಯಾತರು, ದೃಷ್ಟಿಹೀನರು(ಬಿ.ಎಡ್. ಮತ್ತು ಎಂ.ಬಿ.ಎ. ಹೊರತುಪಡಿಸಿ) ಪೂರ್ಣ ಶುಲ್ಕ ವಿನಾಯಿತಿಗೆ ಅರ್ಹರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಎಸ್ಎಸ್ಪಿ ಮೂಲಕ ವಿದ್ಯಾರ್ಥಿವೇತನ ಪಡೆಯಬಹುದು ಎಂದು ತಿಳಿಸಿದ್ದಾರೆ.

ಮಾಹಿತಿಗಾಗಿ 080–27448811, 9741197921, 9483517160 ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.