ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಹಿ ತಿನಿಸುಗಳು ಹಾಗೂ ಆಹಾರ ಪದಾರ್ಥಗಳಲ್ಲಿ ‘ಲಿಕ್ವಿಡ್ ನೈಟ್ರೋಜನ್’ ನಿಷೇಧ

Published 30 ಮೇ 2024, 15:12 IST
Last Updated 30 ಮೇ 2024, 15:12 IST
ಅಕ್ಷರ ಗಾತ್ರ

ಬೆಂಗಳೂರು: ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಸಿಹಿ ತಿನಿಸುಗಳು ಹಾಗೂ ಆಹಾರ ಪದಾರ್ಥಗಳಲ್ಲಿ ‘ಲಿಕ್ವಿಡ್ ನೈಟ್ರೋಜನ್’ ಬಳಕೆಯನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಿಷೇಧಿಸಿದೆ. 

ಈ ಬಗ್ಗೆ ಇಲಾಖೆ ಆಯುಕ್ತರು ಪ್ರಕಟಣೆ ಹೊರಡಿಸಿದ್ದಾರೆ. ರಾಜ್ಯದ ಕೆಲವು ಪ್ರದೇಶಗಳಲ್ಲಿ ‘ಸ್ಮೋಕಿಂಗ್ ಬಿಸ್ಕತ್ತು, ಸಿಹಿ ತಿನಿಸುಗಳು ಹಾಗೂ ಆಹಾರ ಪದಾರ್ಥಗಳ ಸೇವನೆ ಸಂದರ್ಭದಲ್ಲಿ ‘ಲಿಕ್ವಿಡ್ ನೈಟ್ರೋಜನ್’ ಬಳಕೆ ಮಾಡಲಾಗುತ್ತಿದೆ. ಆದರೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006ರ ನಿಯಮಗಳ ಪ್ರಕಾರ ‘ಲಿಕ್ವಿಡ್ ನೈಟ್ರೋಜನ್’ ಅನ್ನು ಹೈನು ಉತ್ಪನ್ನ ಹಾಗೂ ಐಸ್‌ಕ್ರೀಂ ತಯಾರಿಕೆಯ ಸಂದರ್ಭದಲ್ಲಿ ಮಾತ್ರ ಬಳಸಲು ಅನುಮೋದನೆಯಿದೆ ಎಂದು ತಿಳಿಸಲಾಗಿದೆ. 

ಸಿಹಿ ತಿನಿಸುಗಳು ಹಾಗೂ ಆಹಾರ ಪದಾರ್ಥಗಳನ್ನು ಸೇವನೆಗೆ ಒದಗಿಸುವ ಸಂದರ್ಭದಲ್ಲಿ ‘ಲಿಕ್ವಿಡ್ ನೈಟ್ರೋಜನ್’ ಉಪಯೋಗಿಸುವುದನ್ನು ನಿಷೇಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.  

ಕೆಲ ದಿನಗಳ ಹಿಂದೆ ಇಲ್ಲಿನ 12 ವರ್ಷದ ಬಾಲಕಿಯೊಬ್ಬಳು ವಿವಾಹ ಸಮಾರಂಭದಲ್ಲಿ ‘ಸ್ಮೋಕಿ ಪಾನ್’ (ಲಿಕ್ವಿಡ್ ನೈಟ್ರೋಜನ್ ಪಾನ್) ಸೇವಿಸಿ, ಅಸ್ವಸ್ತಳಾಗಿದ್ದಳು. ಬಳಿಕ ಅವಳ ಹೊಟ್ಟೆಯಲ್ಲಿ ರಂಧ್ರ ಕಾಣಿಸಿಕೊಂಡು, ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವೈದ್ಯರು ಚಿಕಿತ್ಸೆ ನೀಡಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT