ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನದಿ ಜೋಡಣೆ ಬಗ್ಗೆ ನಿರ್ಮಲಾ ಸೀತಾರಾಮನ್‌ ಜತೆ ಚರ್ಚೆ ನಡೆಸಿದ್ದೇನೆ: ಬೊಮ್ಮಾಯಿ

Last Updated 9 ಫೆಬ್ರುವರಿ 2022, 7:27 IST
ಅಕ್ಷರ ಗಾತ್ರ

ಬೆಂಗಳೂರು: ‘ನದಿ ಜೋಡಣೆ ಯೋಜನೆ ಕುರಿತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರೊಂದಿಗೆ ಚರ್ಚೆ ನಡೆಸಿದ್ದೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಕುರಿತು ಬಿಜೆಪಿ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಸರಣಿ ಟ್ವೀಟ್ ಮಾಡಿದ್ದು, ‘ಎರಡು ರಾಜ್ಯಗಳು ಒಪ್ಪಿದರೆ ಮಾತ್ರ ನದಿ ಜೋಡಣೆ ಸಾಧ್ಯ ಎಂದು ನಿರ್ಮಲಾ ಸಿತಾರಾಮನ್‌ ಅವರು ಸ್ಪಷ್ಟಪಡಿಸಿದ್ದಾರೆ’ ಎಂದು ತಿಳಿಸಿದ್ದಾರೆ.

‘ಗೋದಾವರಿ, ಕೃಷ್ಣಾ, ಪೆನ್ನಾರ್ ನದಿ ಜೋಡಣೆಯ ಕುರಿತು ನಮ್ಮ ನಿಲುವನ್ನು ನಾವು ಈಗಾಗಲೇ ಸ್ಪಷ್ಟ ಪಡಿಸಿದ್ದೇವೆ. ಎಲ್ಲಿಯವರೆಗೆ ನಮ್ಮ ಪಾಲಿನ ನೀರಿನ ಬಗ್ಗೆ ಹಂಚಿಕೆ ಅಂತಿಮವಾಗುವುದಿಲ್ಲವೋ, ಅಲ್ಲಿಯವರೆಗೆ ನಮ್ಮ ವಿರೋಧವಿರುತ್ತದೆ’ ಎಂದಿದ್ದಾರೆ.

‘ಮೇಕೆದಾಟು ವಿಚಾರವಾಗಿ ನಮ್ಮ ನಿಲುವು ಸ್ಪಷ್ಟವಾಗಿದೆ. ತಮಿಳುನಾಡಿನ ವೈಗೈ -ಗುಂಡಾರು ಯೋಜನೆಗೆ ವಿರೋಧವಿದೆ. ಹೈಡ್ರೋ ಪವರ್ ಯೋಜನೆಗೂ ನಮ್ಮ ವಿರೋಧವಿದೆ’ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಅಂತರರಾಜ್ಯ ಜಲ ವಿವಾದಗಳ ಚರ್ಚೆ ನಡೆಸಲಾಗಿದೆ. ಕೃಷ್ಣಾ ನ್ಯಾಯಾಧಿಕರಣದ ಆದೇಶ ಅಧಿಸೂಚನೆಗೆ ಮನವಿ ಮಾಡಲಾಗಿದೆ. ಸುಪ್ರೀಂಕೋರ್ಟ್​ನಲ್ಲಿ ಅಧಿಸೂಚನೆ ಹೊರಡಿಸುವ ಬಗ್ಗೆ ವಿಚಾರಣೆಗೆ ನ್ಯಾಯಾಧೀಶರನ್ನು ನೇಮಕ ಮಾಡಬೇಕು’ ಎಂದು ಬೊಮ್ಮಾಯಿ ಅವರು ಆಗ್ರಹಿಸಿದ್ದಾರೆ.

ದೆಹಲಿ ಪ್ರವಾಸ ಕೈಗೊಂಡಿರುವ ಅವರು, ನೀರಾವರಿ, ನಗರಾಭಿವೃದ್ಧಿ, ರೈಲ್ವೆ, ಬಂದರು, ರಸ್ತೆ ಅಭಿವೃದ್ಧಿಗಾಗಿ ಕರ್ನಾಟಕ ಕೈಗೆತ್ತಿಕೊಳ್ಳಲಿರುವ ಯೋಜನೆಗಳಿಗೆ ಕೇಂದ್ರ ಸರ್ಕಾರದ ನೆರವು ಕೋರಲು ನಿರ್ಧರಿಸಲಾಗಿದೆ. ಇದಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಲು ಕರ್ನಾಟಕದ ಸಂಸದರೊಂದಿಗೆ ಚರ್ಚೆ ನಡೆಸುವುದಾಗಿ ತಿಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT