ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಜೂನ್‌ 30ಕ್ಕೆ

Published 20 ಜೂನ್ 2024, 12:33 IST
Last Updated 20 ಜೂನ್ 2024, 12:33 IST
ಅಕ್ಷರ ಗಾತ್ರ

ಬೆಂಗಳೂರು: ‘ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)‘ ಜೂನ್‌ 30ರಂದು ನಡೆಯಲಿದ್ದು, ನಿಗದಿತ ಶುಲ್ಕ ಪಾವತಿಸಿ, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು 20ರಿಂದ ಪ್ರವೇಶ ಪತ್ರ ಪಡೆಯಬಹುದು.

ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವೆಬ್‌ಸೈಟ್‌  www.schooleducation.kar.nic.in ನಲ್ಲಿ ಯೂಸರ್‌ ಐಡಿ, ಪಾಸ್‌ವರ್ಡ್‌ ಬಳಸಿ ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಿಕೊಳ್ಳಬಹುದು. ಪ್ರಕಟಿಸಿರುವ ಸೂಚನೆಗಳನ್ನು ಪರೀಕ್ಷೆಯ ವೇಳೆ ಪಾಲಿಸಬೇಕು ಎಂದು ಕೇಂದ್ರೀಕೃತ ದಾಖಲಾತಿ ಘಟಕ ಸೂಚಿಸಿದೆ.

ಪರೀಕ್ಷಾ ಕೇಂದ್ರಗಳ ಕುರಿತು ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವ ಆಯಾ ಜಿಲ್ಲೆಯ ಉಪ ನಿರ್ದೇಶಕರು, ಪರೀಕ್ಷಾ ನೋಡಲ್‌ ಅಧಿಕಾರಿಗಳ ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು ಎಂದೂ ಘಟಕ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT