ರಾಜ್ಯದಲ್ಲಿ ರಾಷ್ಟ್ರ-ಅಂತರರಾಷ್ಟ್ರೀಯ ಮಟ್ಟದಲ್ಲಿ ಗೌರವಕ್ಕೆ ಪಾತ್ರರಾಗಿರುವ ಸಾಹಿತಿಗಳು, ಚಿಂತಕರು ಮತ್ತು ಶಿಕ್ಷಣ ತಜ್ಞರಿರುವಾಗ ಸಂಘ ಪರಿವಾರಕ್ಕೆ ಸೇರಿದ ತಿಳಿಗೇಡಿ ಯುವಕನಿಂದ #ಪಠ್ಯಪರಿಷ್ಕರಣೆ ಮಾಡಿಸಿರುವುದು ರಾಜ್ಯದ ಜನತೆಗೆ ಮಾಡಿರುವ ಅವಮಾನ.
— Siddaramaiah (@siddaramaiah) May 18, 2022
3/9#ಪಠ್ಯಪರಿಷ್ಕರಣೆ pic.twitter.com/ilXHUJbuXL
ಪಠ್ಯಪುಸ್ತಕ ಪರಿಷ್ಕರಣೆಯ ವಿವಾದದಿಂದಾಗಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕ ತಲೆ ತಗ್ಗಿಸುವಂತಾಗಿದೆ. ಪಠ್ಯಪುಸ್ತಕ ಪರಿಷ್ಕರಣೆಯಂತಹ ಗಂಭೀರ ಕಾರ್ಯವನ್ನು ನಾಡಿನ ಹಿರಿಯ ಲೇಖಕರು, ಸಮಾಜ ಸುಧಾರಕರನ್ನು ಅವಹೇಳನ ಮಾಡುತ್ತಾ ಬಂದಿರುವ ಅನರ್ಹ, ಪೂರ್ವಗ್ರಹ ಪೀಡಿತ ವ್ಯಕ್ತಿಯಿಂದ ಮಾಡಿಸಿರುವುದೇ ನಾಡು-ನುಡಿಗೆ ಬಗೆದಿರುವ ದ್ರೋಹ.
— Siddaramaiah (@siddaramaiah) May 18, 2022
4/9#ಪಠ್ಯಪರಿಷ್ಕರಣೆ
ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ನೀಡಿರುವ ಕರಡನ್ನು ತಕ್ಷಣ ವಾಪಸು ಪಡೆದು, ಸಮಿತಿಯನ್ನು ಬರ್ಖಾಸ್ತು ಗೊಳಿಸಬೇಕು ಮತ್ತು ನಾಡಿನ ಚಿಂತಕರು ಮತ್ತು ಶಿಕ್ಷಣ ತಜ್ಞರ ಜೊತೆ ಸಮಾಲೋಚನೆ ನಡೆಸಿ ಹೊಸ ಸಮಿತಿಯನ್ನು ರಚಿಸಬೇಕು ಎಂದು @CMofKarnataka ಅವರನ್ನು ಒತ್ತಾಯಿಸುತ್ತೇನೆ.
— Siddaramaiah (@siddaramaiah) May 18, 2022
5/9#ಪಠ್ಯಪರಿಷ್ಕರಣೆ
ಧರ್ಮವನ್ನು ರಾಜಕೀಯ ದುರುದ್ದೇಶಕ್ಕೆ ಬಳಸಿ ಅದಕ್ಕೆ ಇರುವ ಪಾವಿತ್ರ್ಯವನ್ನು ಹಾಳುಗೆಡಹಿದ @BJP4Karnataka ಈಗ ಎಳೆಯ ಮಕ್ಕಳ ಬುದ್ದಿಕೆಡಿಸುವ ಮೂಲಕ ಶಿಕ್ಷಣ ಕ್ಷೇತ್ರವನ್ನು ರಾಜಕೀಯದ ಅಖಾಡ ಮಾಡಲು ಹೊರಟಿರುವುದು ಖಂಡನೀಯ. ನಾಡಿನ ಪ್ರಜ್ಞಾವಂತರೆಲ್ಲರೂ ಇದರ ವಿರುದ್ಧ ದನಿ ಎತ್ತಬೇಕಾಗಿದೆ.
— Siddaramaiah (@siddaramaiah) May 18, 2022
6/9#ಪಠ್ಯಪರಿಷ್ಕರಣೆ
ರಾಜಕೀಯ ಪಕ್ಷಗಳಿಗೆ ತಮಗೆ ಸರಿಕಂಡ ವ್ಯಕ್ತಿಗಳನ್ನು ಆರಾಧಿಸುವ, ಅವರ ಚಿಂತನೆಗಳನ್ನು ಪ್ರಚಾರ ಮಾಡುವ ಅಧಿಕಾರವಿದೆ, ಆದರೆ ಶಿಕ್ಷಣ ಕ್ಷೇತ್ರವನ್ನು ಸ್ವಾರ್ಥ ರಾಜಕೀಯದ ರಾಡಿಯಿಂದ ಮಲಿನಗೊಳಿಸಬಾರದು.
— Siddaramaiah (@siddaramaiah) May 18, 2022
7/9#ಪಠ್ಯಪರಿಷ್ಕರಣೆ
ಹೆಡಗೆವಾರ್, ಗೋಲ್ವಾಲ್ಕರ್, ಗೋಡ್ಸೆ ಮೊದಲಾದವರನ್ನು @BJP4Karnataka ತಮ್ಮ ಪಕ್ಷದ ವೇದಿಕೆಯಲ್ಲಿ ಮೆರೆದಾಡಿಸಲಿ, ಇವರ ಚಿತ್ರಗಳನ್ನೇ ಪ್ರದರ್ಶಿಸಿ ಚುನಾವಣೆಗಳಲ್ಲಿ ಮತಕೇಳಲಿ, ಪ್ರಜ್ಞಾವಂತ ಜನರು ತಪ್ಪು-ಸರಿಗಳನ್ನು ನಿರ್ಧರಿಸುತ್ತಾರೆ. ಶಿಕ್ಷಣ ಕ್ಷೇತ್ರವನ್ನು ರಾಜಕೀಯ ಸ್ವಾರ್ಥಕ್ಕಾಗಿ ಬಲಿಕೊಡಬೇಡಿ.
— Siddaramaiah (@siddaramaiah) May 18, 2022
9/9#ಪಠ್ಯಪರಿಷ್ಕರಣೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.