ಶನಿವಾರ, 9 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕಕ್ಕೆ ಮತ್ತೆ ನೆಲ–ಜಲ ಸಂಕಷ್ಟ: ಶಿಂದೆ ಧೋರಣೆಗೆ ಬೊಮ್ಮಾಯಿ ಆಕ್ಷೇಪ

Last Updated 22 ನವೆಂಬರ್ 2022, 20:10 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ರಾಜ್ಯಗಳ ನಡುವೆ ವ್ಯಾಜ್ಯಕ್ಕೆ ಪ್ರಚೋದಿಸುವ ಕೆಲಸವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಮಾಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಕರ್ನಾಟಕ- ಮಹಾರಾಷ್ಟ್ರ ರಾಜ್ಯಗಳ ಗಡಿ ವಿವಾದ ಬುಧವಾರ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬರುವ ಹಿನ್ನೆಲೆಯಲ್ಲಿ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್‌ ಶಿಂದೆ ಅವರ ಪ್ರಚೋದಿತ ಹೇಳಿಕೆಗೆ ಬೊಮ್ಮಾಯಿ ಅವರು ಮಂಗಳವಾರ ಈ ಪ್ರತಿಕ್ರಿಯೆ ನೀಡಿದರು.

ಮಹಾರಾಷ್ಟ್ರವು ತನ್ನದೆನ್ನುತ್ತಿರುವ ನೆರೆ ರಾಜ್ಯಗಳಲ್ಲಿನ ಪ್ರದೇಶಗಳಲ್ಲಿನ ಸ್ವಾತಂತ್ರ್ಯ ಹೋರಾಟಗಾರರಿಗೆ ಪಿಂಚಣಿ ಯೋಜನೆ ಮತ್ತು ಈ ಪ್ರದೇಶದ ನಿವಾಸಿಗಳಿಗೆ ಮಹಾತ್ಮ ಫುಲೆ ಜನ ಆರೋಗ್ಯ ಯೋಜನೆ ಜಾರಿಗೊಳಿಸುವುದಾಗಿ ಶಿಂದೆ ಸೋಮವಾರ ಹೇಳಿದ್ದರು.

‘ಮಹಾರಾಷ್ಟ್ರದ ಜತ್ ತಾಲ್ಲೂಕು ಕರ್ನಾಟಕಕ್ಕೆಸೇರಬೇಕೆಂದು ಅಲ್ಲಿನ ಎಲ್ಲಾ ಗ್ರಾಮ ಪಂಚಾಯಿತಿ
ಗಳು ನಿರ್ಧರಿಸಿದ್ದವು. ನಾವು ಅದನ್ನು ಗಂಭೀರವಾಗಿ ಪರಿಗಣಿಸುತ್ತಿದ್ದೇವೆ’ ಎಂದು ಬೊಮ್ಮಾಯಿ ಹೇಳಿದರು. ‘ಏಕೀಕರಣ, ಸ್ವಾತಂತ್ರ್ಯ ಹೋರಾಟ ಹಾಗೂ ಗೋವಾ ವಿಮೋಚನೆಗೆ ಶ್ರಮಿಸಿದ ಮಹಾರಾಷ್ಟ್ರದಲ್ಲಿರುವ ಕನ್ನಡಿಗರಿಗೆ ಪಿಂಚಣಿ ನೀಡಲಾಗುವುದು’ ಎಂದರು.

‘ಮಹಾ’ ಸಿಎಂ ಧೋರಣೆಗೆ ಬೊಮ್ಮಾಯಿ ಆಕ್ಷೇಪ

ಬೆಂಗಳೂರು: ರಾಜ್ಯ ರಾಜ್ಯಗಳ ನಡುವೆ ವ್ಯಾಜ್ಯಕ್ಕೆ ಪ್ರಚೋದಿಸುವ ಕೆಲಸವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಮಾಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಕರ್ನಾಟಕ- ಮಹಾರಾಷ್ಟ್ರ ರಾಜ್ಯಗಳ ಗಡಿ ವಿವಾದ ಬುಧವಾರ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬರುವ ಹಿನ್ನೆಲೆಯಲ್ಲಿ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಅವರ ಪ್ರಚೋದಿತ ಹೇಳಿಕೆಗೆ ಬೊಮ್ಮಾಯಿ ಅವರು ಮಂಗಳವಾರ ಈ ಪ್ರತಿಕ್ರಿಯೆ ನೀಡಿದರು.

ಮಹಾರಾಷ್ಟ್ರವು ತನ್ನದೆನ್ನುತ್ತಿರುವ ನೆರೆ ರಾಜ್ಯಗಳಲ್ಲಿನ ಪ್ರದೇಶಗಳಲ್ಲಿನ ಸ್ವಾತಂತ್ರ್ಯ ಹೋರಾಟಗಾರರಿಗೆ ಪಿಂಚಣಿ ಯೋಜನೆ ಮತ್ತು ಈ ಪ್ರದೇಶದ ನಿವಾಸಿಗಳಿಗೆ ಮಹಾತ್ಮ ಫುಲೆ ಜನ ಆರೋಗ್ಯ ಯೋಜನೆ ಜಾರಿಗೊಳಿಸುವುದಾಗಿ ಶಿಂಧೆ ಸೋಮವಾರ ಹೇಳಿದ್ದರು.

‘ಮಹಾರಾಷ್ಟ್ರದ ಜತ್ ತಾಲ್ಲೂಕು ಕರ್ನಾಟಕಕ್ಕೆ ಸೇರಬೇಕೆಂದು ಅಲ್ಲಿನ ಎಲ್ಲಾ ಗ್ರಾಮ ಪಂಚಾಯಿತಿಗಳು ನಿರ್ಧರಿಸಿದ್ದವು. ನಾವು ಅದನ್ನು ಗಂಭೀರವಾಗಿ ಪರಿಗಣಿಸುತ್ತಿದ್ದೇವೆ’ ಎಂದರು.

‘ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ಹಿತರಕ್ಷಣೆನಮ್ಮ ಕರ್ತವ್ಯ. ಅಲ್ಲಿನ ಕನ್ನಡ ಶಾಲೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಲಾಗುವುದು. ಏಕೀಕರಣ, ಸ್ವಾತಂತ್ರ್ಯ ಹೋರಾಟ ಹಾಗೂ ಗೋವಾ ವಿಮೋಚನೆಗೆ ಶ್ರಮಿಸಿದ ಮಹಾರಾಷ್ಟ್ರದಲ್ಲಿರುವ ಕನ್ನಡಿಗರಿಗೆ ಪಿಂಚಣಿ ನೀಡಲಾಗುವುದು’ ಎಂದು ಬೊಮ್ಮಾಯಿ ಹೇಳಿದರು.

ಗಡಿ ವಿವಾದ: ಇಂದು ವಿಚಾರಣೆ

ಬೆಂಗಳೂರು: ಕರ್ನಾಟಕ– ಮಹಾರಾಷ್ಟ್ರ ಗಡಿ ವಿವಾದ ಕುರಿತು ಮಹಾರಾಷ್ಟ್ರ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿದ ಅರ್ಜಿಯು ಬುಧವಾರ ವಿಚಾರಣೆಗೆ ಬರಲಿದೆ. 2004
ರಲ್ಲಿ ಸಲ್ಲಿಕೆಯಾದ ಅರ್ಜಿಯ ವಿಚಾರಣೆ 18 ವರ್ಷಗಳ ಬಳಿಕ ನಡೆಯಲಿದೆ.ಬೆಳಗಾವಿ, ಬೀದರ್‌, ಭಾಲ್ಕಿ, ಕಾರವಾರ ಸೇರಿದಂತೆ 865 ಹಳ್ಳಿಗಳು ಮಹಾರಾಷ್ಟ್ರಕ್ಕೆ ಸೇರಬೇಕು ಎಂಬುದು ಆ ರಾಜ್ಯದ ವಾದ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT