ಶನಿವಾರ ಸಂಜೆ 4 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿ ಆಯ್ಕೆಗೆ ಕಾಂಗ್ರೆಸ್ನಲ್ಲಿ ಚಟುವಟಿಕೆಗಳು ಬಿರುಸುಗೊಂಡಿವೆ. ನೂತನ ಮುಖ್ಯಮಂತ್ರಿ ಆಯ್ಕೆಗಾಗಿ ಶನಿವಾರ(ಮೇ.30) ಸಂಜೆ 4 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ.
.ಶನಿವಾರ ಸಂಜೆ 4 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ.
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದೆಹಲಿಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದರು.

ಇದೇವೇಳೆ, ಮಗ ಯತೀಂದ್ರ ಸಿದ್ದರಾಮಯ್ಯ ಅವರನ್ನು ಜೊತೆಗೇ ಕರೆದೊಯ್ದಿದ್ದ ಅವರು, ರಾಹುಲ್ ಗಾಂಧಿಗೆ ಪರಿಚಯ ಮಾಡಿಕೊಟ್ಟು ಹೊಸ ಸಂಪುಟದಲ್ಲಿ ಅವಕಾಶ ಕಲ್ಪಿಸಲು ಪ್ರಯತ್ನ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
.ಮಗ ಯತೀಂದ್ರರನ್ನು ರಾಹುಲ್ಗೆ ಪರಿಚಯಿಸಿದ ಸಿದ್ದರಾಮಯ್ಯ: ಸಂಪುಟದಲ್ಲಿ ಸ್ಥಾನ?.
ಕರ್ನಾಟಕದ ವೈದ್ಯಕೀಯ, ಎಂಜಿನಿಯರಿಂಗ್ ಹಾಗೂ ದಂತ ವೈದ್ಯಕೀಯ ಕಾಲೇಜುಗಳ ಒಕ್ಕೂಟ (ಕಾಮೆಡ್–ಕೆ) 2026–27ನೇ ಶೈಕ್ಷಣಿಕ ವರ್ಷದ ಎಂಜಿನಿಯರಿಂಗ್ ಕೋರ್ಸ್ಗಳಿಗೆ ಮೇ 9ರಂದು ನಡೆಸಿದ್ದ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಮೊದಲ 100 ಶ್ರೇಯಾಂಕಗಳ ಪಟ್ಟಿಯಲ್ಲಿ ಕರ್ನಾಟಕದ 30 ಅಭ್ಯರ್ಥಿಗಳು ಸ್ಥಾನ ಪಡೆದಿದ್ದಾರೆ.
.ಕಾಮೆಡ್–ಕೆ ಫಲಿತಾಂಶ ಪ್ರಕಟ: ಜಾರ್ಖಂಡ್ನ ದರ್ಶಿಲ್ ಮೋದಿಗೆ ಮೊದಲ ಸ್ಥಾನ .
ಈ ಹಂತದಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಎಕ್ಸ್ ಖಾತೆ ಮೇಲಿನ ನಿರ್ಬಂಧ ತೆರವುಗೊಳಿಸಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.

ಇದೇ ಸಮಯದಲ್ಲಿ ಮಾಹಿತಿ ತಂತ್ರಜ್ಞಾನ ನಿಯಮಗಳ ಅಡಿಯಲ್ಲಿ ಜುಲೈ 7ರೊಳಗೆ ಈ ವಿಷಯವನ್ನು ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳುವಂತೆ ಪರಿಶೀಲನಾ ಸಮಿತಿಗೆ ಸೂಚಿಸಿದೆ.
.ತಕ್ಷಣಕ್ಕೆ ಕಾಕ್ರೋಚ್ ಜನತಾ ಪಾರ್ಟಿಯ ಎಕ್ಸ್ ಖಾತೆ ನಿರ್ಬಂಧ ತೆರವಿಗೆ ಕೋರ್ಟ್ ನಕಾರ.
ಸಿಬಿಎಸ್ಇ ವಿವಾದಗಳ ಕುರಿತು ಪ್ರತಿಕ್ರಿಯಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 'ಪ್ರಧಾನಿಗೆ ಲಕ್ಷಾಂತರ ಮಕ್ಕಳ ಭವಿಷ್ಯದ ಕುರಿತು ಚಿಂತೆ ಇಲ್ಲ, ಸರ್ಕಾರದ ಅಸ್ತಿತ್ವದ ಬಗ್ಗೆ ಮಾತ್ರ ಕಾಳಜಿ ಹೊಂದಿದ್ದಾರೆ' ಎಂದು ದೂರಿದ್ದಾರೆ.
.ಲಕ್ಷಾಂತರ ಮಕ್ಕಳ ಭವಿಷ್ಯದ ಬಗ್ಗೆ ಪ್ರಧಾನಿ ಮೋದಿಗೆ ಚಿಂತೆ ಇಲ್ಲ: ರಾಹುಲ್ ಆರೋಪ.
ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್ನಲ್ಲಿ ಭಾಗವಹಿಸಲು ಕುಸ್ತಿಪಟು ವಿನೇಶ್ ಫೋಗಟ್ ಅವರಿಗೆ ಅವಕಾಶ ಕಲ್ಪಿಸಿರುವ ಸುಪ್ರೀಂ ಕೋರ್ಟ್, ದೆಹಲಿ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದೆ.

ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್ ರಾಷ್ಟ್ರ ರಾಜಧಾನಿಯಲ್ಲಿ ಮೇ 30, 31ರಂದು (ಶನಿವಾರ, ಭಾನುವಾರ) ನಡೆಯಲಿದೆ.
.ನಿಮ್ಮನ್ನು ತಡೆಯುತ್ತಿಲ್ಲ, ಟ್ರಯಲ್ಸ್ನಲ್ಲಿ ಭಾಗವಹಿಸಿ: ವಿನೇಶ್ಗೆ ‘ಸುಪ್ರೀಂ’.
ದಿಗ್ಗಜ ಸಚಿನ್ ತೆಂಡೂಲ್ಕರ್ ಅವರೂ ರಾಜಸ್ಥಾನ ರಾಯಲ್ಸ್ ತಂಡದ ವೈಭವ್ ಸೂರ್ಯವಂಶಿಯ ಬ್ಯಾಟಿಂಗ್ಗೆ ಮನಸೋತಿದ್ದಾರೆ. ‘ವೈಭವ್ ಬ್ಯಾಟ್ ಬೀಸುವಿಕೆಯ ಶೈಲಿ ಅಮೋಘವಾಗಿದೆ. ಎಲ್ಲಕ್ಕಿಂತ ಚೆಂದ ಎಂದರೆ ಅವರ ಪದಚಲನೆ. ತಮ್ಮ ಕಾಲನ್ನು ಗುರಿಯಾಗಿಸಿಕೊಂಡು ಹಾಕುವ ಎಸೆತಗಳಿಗೆ ಮುಂದಡಿಯನ್ನು ನಿಖರವಾಗಿ ಇಟ್ಟು ಬ್ಯಾಟ್ ಬೀಸಲು ಸ್ಥಳಾವಕಾಶ ಮಾಡಿಕೊಳ್ಳುವ ಪರಿ ಸುಂದರವಾಗಿದೆ. ಅದರಿಂದಾಗಿ ಅವರು ಬ್ಯಾಟ್ ಬೀಸಲು ಮುಕ್ತ ಅವಕಾಸ ಮಾಡಿಕೊಳ್ಳುತ್ತಾರೆ’ ಎಂದು ತೆಂಡೂಲ್ಕರ್ ಅವರು ‘ಎಕ್ಸ್’ನಲ್ಲಿ ಸಂದೇಶ ಹಾಕಿದ್ದಾರೆ.
.IPL 2026: ವೈಭವ್ ಸೂರ್ಯವಂಶಿ ಆಟಕ್ಕೆ ಮನಸೋತ ಸಚಿನ್ .
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ ತಮ್ಮ ನಿವಾಸದ ಹೊರಗಡೆ ಆಟೊ ಚಾಲಕರ ಸಮವಸ್ತ್ರ ಧರಿಸಿ ಚಾಲಕರೊಂದಿಗೆ ಸಂವಾದ ನಡೆಸಿದ್ದಾರೆ.

ಈ ಕುರಿತು ಸುದ್ದಿಸಂಸ್ಥೆ 'ಎಎನ್ಐ' ವರದಿ ಮಾಡಿದೆ. ಆಟೊ ಚಾಲಕರ ಸಮಸ್ಯೆಗಳನ್ನು ಆಲಿಸಿದ ರಾಹುಲ್, ಜೊತೆಯಾಗಿ ಕುಳಿತುಕೊಂಡು ಊಟ ಮಾಡಿದ್ದಾರೆ. ಈ ಸಂದರ್ಭದಲ್ಲಿ ಆಟೊ ಚಾಲಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸಂಸತ್ತಿನಲ್ಲಿ ಧ್ವನಿ ಎತ್ತುವುದಾಗಿ ಭರವಸೆ ನೀಡಿದ್ದಾರೆ.
.VIDEO: ಆಟೊ ಚಾಲಕರ ಸಮವಸ್ತ್ರ ಧರಿಸಿ ಸಂವಾದ ನಡೆಸಿದ ರಾಹುಲ್ ಗಾಂಧಿ.
ಕರ್ನಾಟಕ ತಂಡದ ಬ್ಯಾಟರ್ ಕೆ.ವಿ. ಸಿದ್ಧಾರ್ಥ್ ದೇಶಿ ಕ್ರಿಕೆಟ್ಗೆ ವಿದಾಯ ಘೋಷಿಸಿದರು. ಅಲ್ಪಕಾಲ ಆಡಿದರೂ ಸ್ಮರಣೀಯ ಇನಿಂಗ್ಸ್ಗಳನ್ನು ಕಟ್ಟಿಕೊಟ್ಟ ಆಟಗಾರ ಸಿದ್ಧಾರ್ಥ್. 2018ರಲ್ಲಿ ನಾಗಪುರದಲ್ಲಿ ನಡೆದ ರಣಜಿ ಟ್ರೋಫಿ ಪಂದ್ಯದಲ್ಲಿ ವಿದರ್ಭ ಎದುರು ಕರ್ನಾಟಕ ತಂಡದಲ್ಲಿ ಪದಾರ್ಪಣೆ ಮಾಡಿದರು.
.ದೇಶಿ ಕ್ರಿಕೆಟ್ಗೆ ವಿದಾಯ ಘೋಷಿಸಿದ ಕರ್ನಾಟಕ ತಂಡದ ಬ್ಯಾಟರ್ ಕೆ.ವಿ. ಸಿದ್ಧಾರ್ಥ್.
ಇಂದು (ಮೇ 29) ದಿ. ನಟ ಅಂಬರೀಶ್ ಅವರ 74ನೇ ಜನ್ಮದಿನ. ಸುಮಲತಾ ಅವರು ಪತಿ ನೆನೆದು ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿರುವ ಪತ್ನಿ ಸುಮಲತಾ, ‘ಅಭಿಮಾನಿಗಳು ಪ್ರೀತಿಯಿಂದ ಕೊಂಡಾಡುವ ‘ರೆಬಲ್ ಸ್ಟಾರ್’ ತನ್ನ ಬಳಿ ಸಹಾಯ ಕೇಳಿ ಬಂದವರನ್ನು ಎಂದಿಗೂ ಬರಿಗೈಯ್ಯಲ್ಲಿ ಕಳುಹಿಸದ ‘ಕಲಿಯುಗದ ಕರ್ಣ’ ಈ ಎರಡೂ ಅಂಕಿತಗಳಿಗೆ ಪ್ರತಿರೂಪವಾಗಿದ್ದ ಅಂಬರೀಶ್ ಅವರ ಬದುಕೇ ಒಂದು ಹಬ್ಬವಾಗಿತ್ತು.
.ನಟ ಅಂಬರೀಶ್ ಜನ್ಮದಿನ: ಪತಿ ನೆನೆದು ಸುಮಲತಾ ಭಾವುಕ ಪೋಸ್ಟ್ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.