ಬೆಂಗಳೂರು: ವಿದೇಶಿ ಬಂಡವಾಳ ಸ್ವೀಕಾರದಲ್ಲಿ ಕರ್ನಾಟಕ ನಂಬರ್-1 ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಈ ಕುರಿತು ಅವರು ತಮ್ಮ ಎಕ್ಸ್ ಖಾತೆಯಲ್ಲಿ ಸಂತಸ ಹಂಚಿಕೊಂಡಿದ್ದಾರೆ.

ರಾಜ್ಯಗಳು ಸ್ವೀಕರಿಸಿದ ವಿದೇಶಿ ಬಂಡವಾಳ ಪಟ್ಟಿಯಲ್ಲಿ ಕರ್ನಾಟಕವು ಮೊದಲ ಸ್ಥಾನದಲ್ಲಿದ್ದು, ₹50,107 ಕೋಟಿ ಬಂಡವಾಳ ರಾಜ್ಯಕ್ಕೆ ಹರಿದುಬಂದಿದೆ ಎಂದು ತಿಳಿಸಿದ್ದಾರೆ.

ಕಳೆದ ಹಲವು ವರ್ಷಗಳಿಂದ ಮೊದಲ ಸ್ಥಾನದಲ್ಲಿದ್ದ ಮಹಾರಾಷ್ಟ್ರವನ್ನು ಹಿಂದಿಕ್ಕಿ ರಾಜ್ಯ ಪ್ರಥಮ ಸ್ಥಾನ ತಲುಪಿದೆ. ಇದು ಕರ್ನಾಟಕದ ಬಗೆಗೆ ಅಂತಾರಾಷ್ಟ್ರೀಯ ಹೂಡಿಕೆದಾರರು ಹೊಂದಿರುವ ವಿಶ್ವಾಸ ಮತ್ತು ಭರವಸೆಯನ್ನು ಪ್ರತಿಬಿಂಬಿಸುತ್ತದೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಈ ಸಾಧನೆಗೆ ನಮ್ಮ ಸರ್ಕಾರದ ನೀತಿಗಳು ರಾಜ್ಯದಲ್ಲಿ ಹೂಡಿಕೆಸ್ನೇಹಿ ಪರಿಸರ ನಿರ್ಮಿಸಿರುವುದು ಕಾರಣ ಎಂಬುದನ್ನು ಈ ಸಂದರ್ಭದಲ್ಲಿ ನೆನೆಯ ಬಯಸುತ್ತೇನೆ ಎಂದು ಮೆಚ್ಚುಗೆ ಸೂಚಿಸಿದ್ದಾರೆ.
.ಜಕ್ಕೂರು ಏರೋಡ್ರೋಮ್ ಸ್ಥಳ ಬಳಕೆಗೆ ಚಿಂತನೆ: ಮುಖ್ಯಮಂತ್ರಿ ಸಿದ್ದರಾಮಯ್ಯ .ಅಂಜನಾದ್ರಿ ಬೆಟ್ಟಕ್ಕೆ ಮೂಲಸೌಕರ್ಯ ಒದಗಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.