ಬೆಂಗಳೂರು: ಕೆಎಸ್ಆರ್ಟಿಸಿ, ಬಿಎಂಟಿಸಿ, ಕೆಕೆಆರ್ಟಿಸಿ, ಎನ್ಡಬ್ಲ್ಯುಆರ್ಟಿಸಿಗಳ ನಡುವಿನ 2026ನೇ ಸಾಲಿನ ಅಂತರ ನಿಗಮ ವರ್ಗಾವಣೆಯ ಅಭ್ಯರ್ಥಿಗಳ ಪಟ್ಟಿಯನ್ನು ksrtc.karnataka.gov.in ವೆಬ್ಸೈಟ್ನಲ್ಲಿ ಗುರುವಾರ ಪ್ರಕಟಿಸಲಾಗಿದೆ.

ಮೇಲ್ವಿಚಾರಕರು (ದರ್ಜೆ–3),ನೌಕರರು (ದರ್ಜೆ–4) ಸಾಮಾನ್ಯ ವರ್ಗಾವಣೆ, ಪತಿ–ಪತ್ನಿ, ಶೇ 40 ಕ್ಕಿಂತ ಹೆಚ್ಚಿನ ಅಂಗವೈಕಲ್ಯ ಹೊಂದಿರುವವರು, ತೀವ್ರ ತರಹದ ಅನಾರೋಗ್ಯ ಹೊಂದಿರುವ ನೌಕರರು ಅರ್ಜಿ ಸಲ್ಲಿಸಲು ಅವಕಾಶನೀಡಲಾಗಿತ್ತು. ಪರಸ್ಪರ ವರ್ಗಾವಣೆಗೂ ಅವಕಾಶ ಕಲ್ಪಿಸಲಾಗಿತ್ತು.

ಆಕ್ಷೇಪಣೆಗಳಿದ್ದಲ್ಲಿ ಏಪ್ರಿಲ್ 16ರ ಸಂಜೆ 5.30ರ ಒಳಗೆ ಲಿಖಿತವಾಗಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ. ನೌಕರರು ಆಕ್ಷೇಪಣೆಗಳನ್ನು ಸಂಬಂಧಪಟ್ಟ ವಿಭಾಗದ ಆಡಳಿತಾಧಿಕಾರಿಗಳಿಗೆ ಸಲ್ಲಿಸಿ ಸ್ವೀಕೃತಿ ಪಡೆಯಬೇಕು. ವೈಯಕ್ತಿಕವಾಗಿ ಅಥವಾ ಅಂಚೆಯ ಮೂಲಕ ಕೇಂದ್ರ ಕಚೇರಿಗೆ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.