ಬೆಂಗಳೂರು: ಸಾರಿಗೆ ನಿಗಮಗಳ ನೌಕರರ ಮುಷ್ಕರ ಭಾನುವಾರವೂ ರಾಜ್ಯದಾದ್ಯಂತ ಮುಂದುವರಿದಿದೆ. ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳ ಬಹುತೇಕ ಬಸ್ ಗಳು ರಸ್ತೆಗೆ ಇಳಿದಿಲ್ಲ.

ತಮ್ಮನ್ನೂ ಸರ್ಕಾರಿ ನೌಕರೆರೆಂದು ಪರಿಗಣಿಸುವಂತೆ ಆಗ್ರಹಿಸಿ ಸಾರಿಗೆ ನಿಗಮಗಳ ನೌಕರರು ಗುರುವಾರದಿಂದ ಮುಷ್ಕರ ನಡೆಸುತ್ತಿದ್ದಾರೆ. ನೌಕರರ ಪ್ರತಿಭಟನೆ ಅಂತ್ಯಗೊಳಿಸಲು ರಾಜ್ಯ ಸರ್ಕಾರ ನಡೆಸಿದ ಪ್ರಯತ್ನಗಳು ಫಲ ನೀಡಿಲ್ಲ.

ಇದನ್ನೂ ಓದಿ:ಬಿಎಂಟಿಸಿ ನೌಕರರ ಮೇಲೆ ಹಲ್ಲೆ; 9 ಮಂದಿ ಬಂಧನ

ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ನೌಕರರ ಮನವೊಲಿಕೆಗಾಗಿ ಸಾರಿಗೆ ನೌಕರರ ಸಂಘಟನೆಗಳ ಪ್ರತಿನಿಧಿಗಳ ಸಭೆ ಕರೆದಿದ್ದಾರೆ. ವಿಕಾಸಸೌಧದಲ್ಲಿ ಭಾನುವಾರ ಬೆಳಿಗ್ಗೆ ಸಭೆ ನಿಗದಿಯಾಗಿದೆ.

ಆದರೆ, ತಮಗೆ ಈವರೆಗೂ ಅಧಿಕೃತ ಆಹ್ವಾನ ಬಂದಿಲ್ಲ ಎಂದು ಮುಷ್ಕರದ ನೇತೃತ್ವ ವಹಿಸಿರುವ ಸಾರಿಗೆ ನೌಕರರ ಕೂಟದ ಮುಖಂಡರು ತಿಳಿಸಿದ್ದಾರೆ.

ಇದನ್ನೂ ಓದಿ:ಬೆಳಗಾವಿ: ಸಾರಿಗೆ ನೌಕರರ ಮುಷ್ಕರ ಮುಂದುವರಿಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.